ರಾಷ್ಟ್ರೀಯ ಸುದ್ದಿ

ಬಿಜೆಪಿಯಲ್ಲಿ ಧಮ್ ಇರುವವರು ಗಡ್ಕರಿ ಒಬ್ಬರೇ: ಹಾಡಿ ಹೊಗಳಿದ ರಾಹುಲ್ ಗಾಂಧಿ

‘ಕುಟುಂಬ ನಿರ್ವಹಿಸಲು ಸಾಧ್ಯವಾಗದವರು ದೇಶವನ್ನು ನಿರ್ವಹಿಸಲಾರರು ಎಂಬ ಗಡ್ಕರಿ ಹೇಳಿಕೆಗೆ ಪ್ರತಿಕ್ರಿಯೆ’

ವರದಿಗಾರ (ಫೆ.04): ಬಿಜೆಪಿಯಲ್ಲಿ ಧಮ್ ಇರುವವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತ್ರ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೊಗಳಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ನಾಗ್ಪುರದಲ್ಲಿ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿಯ ಮಾಜಿ ಕಾರ್ಯಕರ್ತರ ಜತೆ ಸಂವಾದ ನಡೆಸುತ್ತಾ,’ಮೊದಲು ಕುಟುಂಬದ ಜವಾಬ್ದಾರಿಗಳನ್ನು ಪೂರೈಸಬೇಕು. ಅದನ್ನು ಮಾಡಲು ಸಾಧ್ಯವಾಗದವರು ದೇಶವನ್ನು ನಿರ್ವಹಿಸಲಾರರು. ಬಿಜೆಪಿಗಾಗಿ ತಮ್ಮ ಬದುಕನ್ನೇ ಮುಡಿಪಾಗಿಡಲು ಸಿದ್ದರಿದ್ದೇವೆ ಎಂದು ಹೇಳಿದ ಹಲವಾರು ಮಂದಿಯನ್ನು ನಾನು ಭೇಟಿ ಮಾಡಿದ್ದೇನೆ. ಹಾಗೆ ಹೇಳಿದವರಲ್ಲಿ ನಾನು  ನೀವು ಏನು ಮಾಡುತ್ತಿದ್ದೀರಿ? ನಿಮ್ಮ ಕುಟುಂಬದಲ್ಲಿ ಯಾರೆಲ್ಲಾ ಇದ್ದಾರೆ? ಎಂಬ ಪ್ರಶ್ನೆಯನ್ನು ಕೇಳಿದ್ದೇನೆ. ಅದಕ್ಕೆ ಅವರು ವ್ಯಾಪಾರ ಉತ್ತಮವಾಗಿ ನಡೆಯದೇ ಇರುವ ಕಾರಣ ಅಂಗಡಿ ಮುಚ್ಚಿದ್ದೇನೆ.ಮನೆಯಲ್ಲಿ ಹೆಂಡತಿ, ಮಕ್ಕಳು ಇದ್ದಾರೆ ಎಂದು ಉತ್ತರಿಸಿದ್ದರು. ಆಗ ನಾನು ಅವರಲ್ಲಿ, ಮೊದಲು ನಿಮ್ಮ ಮನೆ ನೋಡಿಕೊಳ್ಳಿ ಎಂದು ಹೇಳಿದೆ. ಯಾಕೆಂದರೆ  ಸಂಸಾರವನ್ನು ಸರಿಯಾಗಿ ನೋಡಿಕೊಳ್ಳದವರು ದೇಶವನ್ನು ನಿರ್ವಹಿಸಲಾರರು’ ಎಂಬ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗಡ್ಕರಿಯನ್ನು ಹೊಗಳಿ ಟ್ವೀಟ್ ಮಾಡಿರುವುದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಹುಲ್ ಗಾಂಧಿ ತನ್ನ ಟ್ವೀಟಿನಲ್ಲಿ ಗಡ್ಕರಿ ಯವರ ಧೈರ್ಯವನ್ನು ಮೆಚ್ಚಿದ್ದು, ಮುಂದುವರಿಸುತ್ತಾ

  1. ರಫೇಲ್ ಹಗರಣ ಮತ್ತು ಅನಿಲ್ ಅಂಬಾನಿ
  2.  ರೈತರ ಸಂಕಷ್ಟ
  3. ಸಂಸ್ಥೆಗಳ ಅಳಿವು

ಈ ಮೂರು ವಿಷಯಗಳ ಬಗ್ಗೆ ಮಾತನಾಡುವಂತೆಯೂ ರಾಹುಲ್ ವಿನಂತಿಸಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂವಾದ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆ “ಸುಳ್ಳು ಭರವಸೆಯಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ” ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಗಡ್ಕರಿ ಬಿಜೆಪಿಗರಿಗೆ ಮಾನವೀಯತೆಯ ಪಾಠ ಮಾಡುವ ಮೂಲಕ ಮತ್ತೊಮ್ಮೆ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

 

To Top
error: Content is protected !!
WhatsApp chat Join our WhatsApp group