ರಾಜ್ಯ ಸುದ್ದಿ

ಲೋಕಸಭಾ ಚುನಾವಣೆಯು ವಿಚಾರಧಾರೆಗಳ ನಡುವಿನ ಹೋರಾಟ: ರಾಹುಲ್ ಗಾಂಧಿ

‘ಚೌಕಿದಾರ್ ಸಾಲ ಮನ್ನಾ ಮಾಡದೇ, ನಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಾರೆ’.

‘ಇತಿಹಾಸದಲ್ಲೇ ನ್ಯಾಯಮೂರ್ತಿಗಳು ಮೊದಲ ಬಾರಿಗೆ ಜನರ ಬಳಿ ಬಂದು ನ್ಯಾಯ ಕೇಳುವ ಪರಿಸ್ಥಿತಿ ಮೋದಿ ಆಡಳಿತದಲ್ಲಿ ನಿರ್ಮಾಣವಾಗಿದೆ’

ವರದಿಗಾರ (ಮಾ.19): ಈದೀಗಾಗಲೇ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯು ವಿಚಾರಧಾರೆಗಳ ನಡುವಿನ ಹೋರಾಟವಾಗಿದ್ದು, ಜೆಡಿಎಸ್ ಜೊತೆ ಕೆಲಸ ಮಾಡಿ ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಕರ್ನಾಟಕದಲ್ಲಿ ನಾವು ಜೆಡಿಎಸ್ ಜೊತೆ ಸೇರಿ ಲೋಕಸಭಾ ಚುನಾವಣೆ ಎದುರಿಸಲು ಹೊರಟಿದ್ದೇವೆ. ಬೂತ್‌ಮಟ್ಟದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಿ, ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಅವರು ಸೋಮವಾರ ಕಲಬುರ್ಗಿಯ ಎನ್.ವಿ.ಮೈದಾನದಲ್ಲಿ ಕೆಪಿಸಿಸಿ ಹಮ್ಮಿಕೊಂಡಿದ್ದ ಪರಿವರ್ತನಾ ಯಾತ್ರೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

‘ನಾವು ಕೊಟ್ಟ ಭರವಸೆಯಂತೆ ರೈತರ ಸಾವಿರಾರು ಕೋಟಿ ರೂ.ಸಾಲ ಮನ್ನಾ ಮಾಡಿದ್ದೇವೆ. ಚೌಕಿದಾರ್ ಸಾಲ ಮನ್ನಾ ಮಾಡದೇ, ನಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಾರೆ. ರೈತರು ಕಟ್ಟುವ ವಿಮಾ ಹಣವನ್ನು ನರೇಂದ್ರಮೋದಿ ತಮ್ಮ ಸ್ನೇಹಿತರಿಗೆ ನೀಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಸಾಲ ಮನ್ನಾದಿಂದ ರೈತರಿಗೆ ಸ್ವಲ್ಪ ಸಹಾಯವಾಗುತ್ತದೆ. ಆದರೆ, ನಮ್ಮ ಸಂಕಲ್ಪ ಹೊಲಗಳ ಸಮೀಪವೇ ಆಹಾರ ಸಂಸ್ಕರಣಾ ಘಟಕಗಳು ಸ್ಥಾಪನೆಯಾಗಬೇಕು. ಕರ್ನಾಟಕ, ಪಂಜಾಬ್, ರಾಜಸ್ಥಾನ್, ಛತ್ತೀಸ್‌ಗಡ, ಮಧ್ಯಪ್ರದೇಶದಲ್ಲಿ ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ’ ಎಂದು ಅವರು ಹೇಳಿದರು.

ನ’ಮಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಇತಿಹಾಸದಲ್ಲೇ ಮೊದಲ ಬಾರಿಗೆ ಜನರ ಬಳಿ ಬಂದು ನ್ಯಾಯ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಆರ್‌ಬಿಐ ಅನುಮತಿಯಿಲ್ಲದೇ ನೋಟುಗಳ ರದ್ಧತಿ, ಚುನಾವಣಾ ಆಯೋಗದ ಮೇಲೆ ಪ್ರಭಾವ, ಒಬ್ಬ ವ್ಯಕ್ತಿಯೇ ರಾಜ್ಯ ಆಳಬೇಕು ಎಂಬ ಮನಸ್ಥಿತಿಯನ್ನು ನರೇಂದ್ರಮೋದಿ ಹೊಂದಿದ್ದಾರೆ’ ಎಂದು ರಾಹುಲ್ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ,  ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್, ಸಚಿವ ರಹೀಮ್‌ ಖಾನ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಡಾ.ಆಜಯ್‌ ಸಿಂಗ್, ಶಾಸಕಿ ಕನಿಝ್ ಫಾತಿಮಾ, ಸಂಸದರಾದ ಕೆ.ಎಚ್.ಮುನಿಯಪ್ಪ, ವಿ.ಎಸ್.ಉಗ್ರಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

To Top
error: Content is protected !!
WhatsApp chat Join our WhatsApp group