ಯಡಿಯೂರಪ್ಪ ತಿಪ್ಪರಲಾಗ ಹಾಕಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ಸಿದ್ದರಾಮಯ್ಯ

ಎಲ್ಲದಕ್ಕೂ ಚುನಾವಣೆಯಲ್ಲಿ ಉತ್ತರ ಕೊಡ್ತಾರಂತೆ ಸಿದ್ದರಾಮಯ್ಯ

ತಕ್ಷಣ ದೋಷಾರೋಪ ಪಟ್ಟಿ ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಒತ್ತಾಯ

ವರದಿಗಾರ-ಕೋಲಾರ: ಯಡಿಯೂರಪ್ಪರ ಮೇಲೆ ಪ್ರಕರಣ ದಾಖಲಾಗುತ್ತಲೇ ಇದೆ. ಅವರು ತಿಪ್ಪರಲಾಗ ಹಾಕಿದರೂ ಬಿಜೆಪಿಯು ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ 150ಸೀಟು ಜೇಬಲ್ಲಿ ಇಟ್ಟುಕೊಂಡವರಂತೆ ಮಾತಾಡ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಯಾರೂ ನಿರ್ನಾಮ ಮಾಡಲು ಸಾಧ್ಯವಿಲ್ಲ. ಎಲ್ಲದಕ್ಕೂ ಚುನಾವಣೆಯಲ್ಲಿ ಉತ್ತರ ಕೊಡ್ತೇವೆ ಎಂದು ಮುಖ್ಯಮಂತ್ರಿ ಸಿ.ಎಂ. ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಅವರು ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಯಡಿಯೂರಪ್ಪರಲ್ಲಿ ನಮ್ಮ ವಿರುದ್ಧದ ದೋಷಾರೋಪ ಪಟ್ಟಿ ಇದ್ದರೆ ತಕ್ಷಣ ಬಿಡುಗಡೆ ಮಾಡಲಿ. ಅವರೊಬ್ಬ ದೊಡ್ಡ ಸುಳ್ಳುಗಾರ. ಅವರು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಯಡಿಯೂರಪ್ಪರ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದು, ಇತರರ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವಂತಹ ಎಲ್ಲರಿಗೂ ಟಿಕೆಟ್ ಕೊಡುತ್ತೇವೆ. ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಇಲ್ಲದವರು ಬೇರೆ ಕ್ಷೇತ್ರ ಹುಡುಕಿಕೊಳ್ಳಬೇಕು. ನನಗೆ ಅಂತ ಪರಿಸ್ಥಿತಿ ನಿರ್ಮಾಣವಾಗಿಲ್ಲ. ನಾನು ನನ್ನ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್.ರಮೇಶ್ ಕುಮಾರ್, ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

error: Content is protected !!
%d bloggers like this:
Inline
Inline