ವಿದೇಶ ಸುದ್ದಿ

ಭಾರತದಲ್ಲಿ ವಿಭಜನಾ ರಾಜಕೀಯ ನಡೆಯುತ್ತಿರುವುದು ಅಪಯಕಾರಿ ಬೆಳವಣಿಗೆ- ರಾಹುಲ್ ಗಾಂಧಿ

ದೇಶದಲ್ಲಿ ಅಶಾಂತಿ ಸೃಷ್ಟಿಸುವ ಯತ್ನ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ

ವರದಿಗಾರ-ನ್ಯೂಯಾರ್ಕ್:ಶಾಂತಿ ಪ್ರಿಯ ದೇಶವಾದ ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಯತ್ನ ನಿರಂತರವಾಗಿ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರತಿಷ್ಠೆ-ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ನ್ಯೂಯಾರ್ಕ್‍ನ ಟೈಮ್ಸ್ ಸ್ಕ್ವೇರ್ ಸಮೀಪ ತನ್ನ ಬೆಂಬಲಿಗರನ್ನುದ್ದೇಶಿಸಿ ಮಾತನಾಡು ತ್ತಿದ್ದರು.

ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯಿಂದ ಯಾವ ರೀತ ಬದುಕಬೇಕೆಂಬುದನ್ನು ಭಾರತ ವಿಶ್ವಕ್ಕೆ ತೋರಿಸಿಕೊಟ್ಟಿದೆ. ಭಾರತದಲ್ಲಿ ವಿಭಜನಾ ರಾಜಕೀಯ ನಡೆಯತ್ತಿರುವುದು ಅತ್ಯಂತ ಅಪಯಕಾರಿ ಬೆಳವಣಿಗೆಯಾಗಿದೆ. ಸಹಸ್ರಾರು ವರ್ಷಗಳಿಂದಲೂ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗೌರವ ಇದೆ. ಆದರೆ ದೇಶವನ್ನು ವಿಭಜಿಸುವ ಶಕ್ತಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರತಿಷ್ಠೆ-ಗೌರವಕ್ಕೆ ಧಕ್ಕೆ ತರುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳುತ್ತಾ ಕೇಂದ್ರ ಸರಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ಧಾರೆ.

To Top
error: Content is protected !!
WhatsApp chat Join our WhatsApp group