ಖ್ಯಾತ ನಟ ಪ್ರಕಾಶ್‌ ರೈಗೆ ಇಂದು ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

ವರದಿಗಾರ:ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ, ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್ ಸಹಯೋಗದಲ್ಲಿ ನೀಡಲಾಗುತ್ತಿರುವ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ಸಂಜೆ 3:30ಕ್ಕೆ ಕೋಟದ ಡಾ. ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯಲಿದ್ದು, ಖ್ಯಾತ ನಟ ಪ್ರಕಾಶ್‌ ರೈಗೆ ಪ್ರಶಸ್ತಿಯನ್ನು ಪಡೆಯಲಿದ್ದಾರೆ.

ಪ್ರಸಕ್ತ ದೇಶದಲ್ಲಿ ನಡೆಯುತ್ತಿರುವ ವಾಸ್ತವತೆಯನ್ನು ಮನಬಿಚ್ಚಿ ಹೇಳಿದಕ್ಕಾಗಿ ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಪಾತ್ರರಾದ ಪ್ರಕಾಶ್‌ ರೈ ವಿರುದ್ಧ ಕೆಲ ಸಂಘಟನೆಗಳು ಮಾತ್ರ ವಿರೋಧ ವ್ಯಕ್ತಪಡಿಸಿತ್ತು. ಈ ಬಗ್ಗೆ ಹಲವರು ತಮ್ಮ ಮುಕ್ತ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು ಪ್ರಶಸ್ತಿಗೆ ಪಾತ್ರರಾದ ಪ್ರಕಾಶ್‌ ರೈಯವರನ್ನು ಅಭಿನಂದಿಸಿದ್ದಾರೆ.

ಕಾರ್ಯಕ್ರಮವನ್ನು ಸಚಿವ ಪ್ರಮೋದ್ ಮಧ್ವರಾಜ್‌ ಉದ್ಘಾಟಿಸಲಿದ್ದು,ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್‌.ಪ್ರಮೋದ್ ಹಂದೆ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್‌ಚಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಮತ್ತಿತರರ ಅತಿಥಿಗಳು ಭಾಗವಹಿಸಲಿದ್ದಾರೆ.

error: Content is protected !!
%d bloggers like this:
Inline
Inline