ರಾಜ್ಯ ಸುದ್ದಿ

ಟಿಪ್ಪು, ಸಿದ್ದರಾಮಯ್ಯ ಕರ್ನಾಟಕದಲ್ಲಿ ಹುಟ್ಟಿದ್ದು, ಅಡ್ವಾಣಿಯಂತೆ ಪಾಕಿಸ್ತಾನದಲ್ಲಿ ಹುಟ್ಟಿಲ್ಲ: ಬಿಜೆಪಿಗೆ ಝಮೀರ್ ತಿರುಗೇಟು

ವರದಿಗಾರ: ಟಿಪ್ಪು ಸುಲ್ತಾನ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟಿರುವುದು ಕರ್ನಾಟಕದ ಮಣ್ಣಿನಲ್ಲೇ ಹೊರತು ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿಯಂತೆ ಪಾಕಿಸ್ತಾನದ ಲಾಹೋರ್ ನಲ್ಲಿ ಹುಟ್ಟಿಲ್ಲ ಎಂದು ಶಾಸಕ ಝಮೀರ್ ಅಹ್ಮದ್ ಖಾನ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುವುದಾದರೆ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋಗಲಿ ಎಂಬ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ಹೇಳಿಕೆಗೆ ಝಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ.

2012ರಲ್ಲಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಮತ್ತು ಆರ್. ಆಶೋಕ್ ಟಿಪ್ಪು ಜಯಂತಿಯನ್ನು ಆಚರಿಸಿದ್ದಾರೆ. 2013ರಲ್ಲಿ ಕೆಜೆಪಿಯನ್ನು ಸ್ಥಾಪಿಸಿದ ಸಂದರ್ಭ ಯಡಿಯೂರಪ್ಪ ಮುಸ್ಲಿಮರ ಮತವನ್ನು ಓಲೈಸಲು ಟಿಪ್ಪು ಜಯಂತಿ ಆಚರಿಸುವುದಾಗಿ ಹೇಳಿದ್ದರು. ಆದರೆ ಈಗ ವಿರೋಧಿಸುತ್ತಿದ್ದಾರೆ. ಇವರಿಗೆ ಟಿಪ್ಪು ಜಯಂತಿ ವಿರೋಧಿಸುವ ಯಾವ ನೈತಿಕತೆಯಿದೆ ಎಂದು ಝಮೀರ್ ಪ್ರಶ್ನಿಸಿದ್ದಾರೆ.

ಬಿಜೆಪಿಗರು ವಿರೋಧ ಪಡಿಸಿದಷ್ಟು ನಮ್ಮಲ್ಲಿ ಉತ್ಸಾಹ ಹೆಚ್ಚುತ್ತದೆ ಎಂದು ಅವರು ಹೇಳಿದ್ದಾರೆ.

Most Popular

To Top
error: Content is protected !!