ರಾಜ್ಯ ಸುದ್ದಿ

ಗೌರಿ ಹತ್ಯೆಯು ಸಮಾಜವನ್ನು ಭಯ ಬೀಳಿಸುವ ಭಾಗವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವರದಿಗಾರ: ಸಾಮಾಜಿಕ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಸಾವು ಸಮಾಜಕ್ಕಾದ ನಷ್ಟ. ಗೌರಿ ಹತ್ಯೆಯು ಸಮಾಜವನ್ನು ಭಯ ಬೀಳಿಸುವ ಪ್ರಯತ್ನದ ಭಾಗವಾಗಿದೆ. ನೇರ, ನಿಷ್ಟೂರವಾದಿಯಾಗಿದ್ದು ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಗೌರಿ ಲಂಕೇಶ್ ರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನದ ಮೊದಲ ದಿನವಾದ ಇಂದು ಸಂತಾಪ ಸೂಚಕ ನಿರ್ಣಯದ ಬಗ್ಗೆ ಮಾತನಾಡುತ್ತಾ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.

ನ್ಯಾಯಕ್ಕಾಗಿ ಹೋರಾಟ ಮಾಡುವವರನ್ನು ಹತ್ಯೆ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹತ್ಯೆಮಾಡಿದ ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತನಿಖಾ ದಳ(ಎಸ್‍ಐಟಿ) ರಚನೆ ಮಾಡಲಾಗಿದೆ. ಈವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಆದರೆ ಸರಕಾರ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!