ಬೆಂಗಳೂರು: ವ್ಯಕ್ತಿಯನ್ನು ಹಾಡಹಗಲೇ ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ವರದಿಗಾರ: ಹಾಡಹಗಲೇ ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಬೆಳವಂಗಲದ ನಿವಾಸಿ ಮುದ್ದುಕೃಷ್ಣ (41 ವ.) ದುಷ್ಕರ್ಮಿಗಳ ಗುಂಡೇಟಿನಿಂದ ಹತ್ಯೆಯಾದವರು.

ಮುದ್ದುಕೃಷ್ಣ ವ್ಯವಸಾಯ ಹಾಗೂ ಲೇವಾದೇವಿ ವ್ಯವಹಾರ ಮಾಡುತ್ತಿದ್ದರು ಎನ್ನಲಾಗಿದೆ.

ಮುದ್ದುಕೃಷ್ಣ  ನಿನ್ನೆ ಸಂಜೆ 5.30ರ ವೇಳೆ ತನ್ನ ಬೈಕ್‍ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಎದೆಗೆ ಗುಂಡು ಹಾರಿಸಿದ್ದು, ಪರಾರಿಯಾಗಿದ್ದಾರೆ.

ಗುಂಡೇಟಿನಿಂದ ಕುಸಿದು ಬಿದ್ದ ಮುದ್ದುಕೃಷ್ಣನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

ಹತ್ಯೆಯ ಹಿಂದಿರುವ ಕಾರಣ  ತಿಳಿದು ಬಂದಿಲ್ಲ. ಈ ಬಗ್ಗೆ ದೊಡ್ಡಬೆಳವಂಗಲ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

error: Content is protected !!
%d bloggers like this:
Inline
Inline