ರಾಜ್ಯ ಸುದ್ದಿ

ಅಂಬೇಡ್ಕರ್ ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕಾಗಿ ಪೇಜಾವರ ಶ್ರೀಗಳು ಸಂವಿಧಾನವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ: ಛಲವಾದಿ ಗುರುಪೀಠದ ಸ್ವಾಮೀಜಿ

ವರದಿಗಾರ (28.11.2017): ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್  ರವರು ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕಾಗಿ ಪೇಜಾವರ ಶ್ರೀಗಳು ಸಂವಿಧಾನವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ಹೇಳಿದ್ದಾರೆ.

ಅವರು ಉಡುಪಿಯಲ್ಲಿ ನಡೆದ ಧರ್ಮ ಸಂಸತ್‌ನಲ್ಲಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸಂವಿಧಾನ ಬದಲಾವಣೆ ಮಾಡಬೇಕು ಎಂದು ನೀಡಿರುವ ಹೇಳಿಕೆಯನ್ನು ಖಂಡಿಸುತ್ತಾ, ಚಿತ್ರದುರ್ಗದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಪೂರ್ವಗ್ರಹ ಪೀಡಿತರಾಗಿ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ತಕ್ಷಣ ಅವರು ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅವರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ದೇಶದ ಸಂವಿಧಾನ ಪ್ರತಿ ನಾಗರಿಕನಿಗೂ ಧರ್ಮ ಮತ್ತು ಕರ್ತವ್ಯದ ಹಕ್ಕನ್ನು ನೀಡಿದೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಕೇವಲ ಶೇ 2ರಷ್ಟು ಮಂದಿ ಸಂವಿಧಾನ ಒಪ್ಪಿಕೊಳ್ಳದಿದ್ದರೆ ಯಾರೂ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜ್, ಛಲವಾದಿ ಸಮುದಾಯದ ಮುಖಂಡರಾದ ಕೆ.ಕೃಷ್ಣಪ್ಪ,  ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಎಸ್.ಎನ್.ರವಿಕುಮಾರ್, ಶೇಷಣ್ಣ, ವಕೀಲ ಪ್ರತಾಪ್‌ ಜೋಗಿ ಉಪಸ್ಥಿತರಿದ್ದರು.

 

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group