ಹನಿ ಸುದ್ದಿ

ಕಾಂಗ್ರೆಸ್ ಗೆ ರಾಹುಲ್ ಸಾರಥ್ಯ

ವರದಿಗಾರ (11.12.2017): ರಾಷ್ಟ್ರೀಯ ಕಾಂಗ್ರೆಸ್ ಇದರ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

ಕಾಂಗ್ರೆಸ್ ಆಂತರಿಕಾ ಚುನಾವಣಾ ಸಮಿತಿಯ ನೇತೃತ್ವ ವಹಿಸಿರುವ ಮುಲ್ಲಪ್ಪಳ್ಳಿ ರಾಮಚಂದ್ರನ್ ಸುದ್ದಿಗೋಷ್ಠಿ  ಕರೆದಿದ್ದು, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಪಕ್ಷದ ಉಪಾಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಮಾತ್ರ ಈ  ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

ಡಿಸೆಂಬರ್ 16ರಂದು ರಾಹುಲ್‌ ಗಾಂಧಿ ಕಾಂಗ್ರೆಸ್‌ ಆಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

 

To Top
error: Content is protected !!
WhatsApp chat Join our WhatsApp group