ಸುತ್ತ-ಮುತ್ತ

ಡಿಸಂಬರ್ 23ಕ್ಕೆ ವಿಟ್ಲದಲ್ಲಿ ಬೃಹತ್ ರಕ್ತದಾನ ಶಿಬಿರ

ವರದಿಗಾರ (20.12.2017) :  ಡಿ ಗ್ರೂಪ್ ವಿಟ್ಲ (ರಿ)  ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ  23.12.2016 ರಂದು ಶನಿವಾರ ಸಮಯ ಬೆಳಗ್ಗೆ 9ರಿಂದ ಮಧ್ಯಾಹ್ನ 1 ರ ವರೆಗೆ  ವಿಟ್ಲದ  VH ಕಟ್ಟಡದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರದ ಜೊತೆ ಸನ್ಮಾನ ಕಾರ್ಯಕ್ರಮವೂ ಜರುಗಲಿದೆ.  ಮತ್ತು ರಕ್ತದಾನ ಮಾಡಿದ ಎಲ್ಲಾ ರಕ್ತದಾನಿಗಳಿಗೂ ಶಿಬಿರಾರ್ಥಿ ಪತ್ರ ದೊರಕಲಿದೆ.  ಊರಿನ ಹಲವು  ಗಣ್ಯರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ನೂರಾರು ಯುವಕರು ಸ್ವಯಂ ಪ್ರೇರಿತ ರಕ್ತದಾನ ಮಾಡಲಿದ್ದಾರೆ, ಎಂದು ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಡಿ ಗ್ರೂಪ್ ವಿಟ್ಲ ಇದರ ಸಂಘಟಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group