ರಾಷ್ಟ್ರೀಯ ಸುದ್ದಿ

ಭೀಮಾ-ಕೋರೆಗಾಂವ್ ಹಿಂಸಾಚಾರದ ಹಿಂದೆ ಆರೆಸ್ಸೆಸ್ ಕೈವಾಡ: ಮಲ್ಲಿಕಾರ್ಜುನ ಖರ್ಗೆ

ವರದಿಗಾರ (ಜ.3):  ಭೀಮಾ-ಕೋರೆಗಾಂವ್ ಯುದ್ಧದ 200ನೇ ವರ್ಷಾಚರಣೆ ಸಂದರ್ಭ ದಲಿತರ ಮೇಲೆ ಕಲ್ಲು ತೂರಾಟ ನಡೆಸಿ ಹಿಂಸಾಚಾರ ನಡೆಸಿರುವುದರ ಹಿಂದೆ ಆರೆಸ್ಸೆಸ್ ಕೈವಾಡವಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರೋಪಿಸಿದ್ದು, ಹಿಂಸಾಚಾರಕ್ಕೆ ಮಹಾರಾಷ್ಟ್ರ ಸರಕಾರ ನೇರ ಹೊಣೆ ಎಂದು ಹೇಳಿದ್ದಾರೆ.

ಸದನದಲ್ಲಿ ಪುಣೆಯ ಭೀಮಾ-ಕೋರೆಗಾಂವ್ ನಲ್ಲಿ ನಡೆದ ಹಿಂಸಾಚಾರ ಘಟನೆಯ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಈ ಸಂದರ್ಭ ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದಿದೆ ಎಂದು ಮೂಲಗಳು ವರದಿ ಮಾಡಿವೆ.

ದೇಶದಲ್ಲಿ ದಲಿತರು ನಿರಂತರವಾಗಿ ದಾಳಿಗೆ ಒಳಗಾಗುತ್ತಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಾಳಿ, ದೌರ್ಜನ್ಯಗಳು ಹೆಚ್ಚಾಗಿದೆ. ಪುಣೆ ಹಿಂಸಾಚಾರದ ಹಿಂದೆ ಆರೆಸ್ಸೆಸ್ ನೇರ ಕೈವಾಡವಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಹಿಂಸಾಚಾರ ಘಟನೆಯನ್ನು ಸುಪ್ರೀಂಕೋರ್ಟಿನ  ನ್ಯಾಯಾಧೀಶರು ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group