ರಾಜ್ಯ ಸುದ್ದಿ

ಕಾರ್ಕಳದಲ್ಲಿ ನಡೆದ ಕೊಲೆ ಯತ್ನ ಪ್ರಕರಣ: ಬಜರಂಗದಳದ ಮುಖಂಡ ಪ್ರಮುಖ ಆರೋಪಿ

ವರದಿಗಾರ (ಜ.5): ಉಡುಪಿ ಜಿಲ್ಲೆಯ ಕಾರ್ಕಳದ ಹೊರ ವಲಯದ ಬಂಗ್ಲೆಗುಡ್ಡೆಯಲ್ಲಿ ಗುರುವಾರ ರಾತ್ರಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳ ತಂಡವೊಂದು ಇಬ್ಬರ ಮೇಲೆ ಮಾರಾಕಾಸ್ತ್ರಗಳಿಂದ ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳದ ಸ್ಥಳೀಯ ಮುಖಂಡ ಮಹೇಶ್ ಶೆಣೈ ಪ್ರಮುಖ ಆರೋಪಿಯೆಂದು ಪ್ರಕರಣ ದಾಖಲಾಗಿದೆ.

ಕಾರ್ಕಳದ ಶೇಖ್‌ಮೊಹಸಿನ್ ರನ್ನು ಅಡ್ಡಗಟ್ಟಿದ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ತಂಡ ಮಹಮ್ಮದ್ ಎನ್ನುವವರ ಮೇ‌ಲೆ ಹಲ್ಲೆ ಮಾಡಿದ್ದು, ಸಲ್ಮಾನ್ ಎಂಬುವವರ ಮೇಲೆ ಹಲ್ಲೆಗೆ ಪ್ರಯತ್ನಿಸಿದೆ.

ಈ ಪ್ರಕರಣದಲ್ಲಿ ಬಜರಂಗದಳದ ಸ್ಥಳೀಯ ಮುಖಂಡ ಮಹೇಶ್ ಶೆಣೈ, ಗಣೇಶ್ ಪೂಜಾರಿ  ಸೇರಿದಂತೆ ಇತರ ಮೂವರು ಅಪರಿಚಿತರು ವಿರುದ್ಧ ಪ್ರಕರಣ ದಾಖಲಾಗಿದೆ.

To Top
error: Content is protected !!
WhatsApp chat Join our WhatsApp group