ರಾಜ್ಯ ಸುದ್ದಿ

ಬಿಜೆಪಿ, ಆರೆಸ್ಸೆಸ್, ಬಜರಂಗದಳದವರು ಉಗ್ರಗಾಮಿಗಳು: ಸಿದ್ದರಾಮಯ್ಯ

ವರದಿಗಾರ (10): ಬಿಜೆಪಿ, ಆರೆಸ್ಸೆಸ್, ಬಜರಂಗದಳದವರೇ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಚಾಮರಾಜನಗರದ ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ತಾಲ್ಲೂಕಿನ ನಾಗವಳ್ಳಿ ಗ್ರಾಮಕ್ಕೆ ಇಂದು ಆಗಮಿಸಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ, ಸೌಹಾರ್ಧಕ್ಕೆ ಧಕ್ಕೆ ತರುವ ಯಾರೇ ಆದರೂ ಸರಕಾರ ಸಹಿಸಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮವನ್ನು ಸರಕಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಪಿಎಫ್‌ಐ, ಎಸ್‌ಡಿಪಿಐ, ಆರ್‌ಎಸ್‌ಎಸ್, ಬಜರಂಗದಳ, ವಿಶ್ವ ಹಿಂದೂ ಪರಿಷತ್ ಯಾವುದೇ ಸಂಘಟನೆಯಾದರೂ ಸಾಮರಸ್ಯ ಕದಡುವುದನ್ನು, ಕೋಮುವಾದಕ್ಕೆ ಪ್ರಚೋದನೆ ನೀಡುವುದನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ದೀಪಕ್ ಕೊಲೆಯಲ್ಲಿ  ಪಿ ಎಫ್ ಐ ಸಂಘಟನೆಯ ಯಾವುದೇ ಕೈವಾಡ ಇರುವುದು ಪೊಲೀಸ್ ತನಿಖೆಯಲ್ಲಿ ಕಂಡು ಬಂದಿಲ್ಲವೆಂದು ಅವರು ಇದೇ ವೇಳೆ ತಿಳಿಸಿದ್ದಾರೆ

Click to comment

Leave a Reply

Your email address will not be published. Required fields are marked *

To Top
error: Content is protected !!