ರಾಜ್ಯ ಸುದ್ದಿ

ಅಧಿಕಾರಕ್ಕೆ ಬಂದ್ಮೇಲೆ ನಿಮ್ಮನ್ನು ನೋಡಿಕೊಳ್ಳುತ್ತೇನೆ: ಅಧಿಕಾರಿಗಳಿಗೆ ಯಡಿಯೂರಪ್ಪ ಎಚ್ಚರಿಕೆ

ವರದಿಗಾರ (ಜ.11): ಪೊಲೀಸ್ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮೇಲೆ ದೌರ್ಜನ್ಯಗಳು ನಡೆಸುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದ್ಮೇಲೆ ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಅವರು ತುಮಕೂರಿನ ಶಿರಾದಲ್ಲಿ ಇಂದು ಹಮ್ಮಿಕೊಂಡಿದ್ದ ಬಿಜೆಪಿ ಪರಿವರ್ತನಾ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ.

ನಮ್ಮ ಕಾರ್ಯಕರ್ತರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗುತ್ತಿದೆ ಮತ್ತು ರೌಡಿ ಶೀಟರ್ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಆರೆಸ್ಸೆಸ್ ಬಗ್ಗೆ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಬಚ್ಚಾ ಎಂದು ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನತೆ ಚೆನ್ನಾಗಿ ಪಾಠ ಕಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!