ರಾಜ್ಯ ಸುದ್ದಿ

ಕ್ರಿಮಿನಲ್ ರಾಜಕೀಯದಿಂದ ಬಿಜೆಪಿ ಹೊರ ಬರಲಿ: ವೇಣುಗೋಪಾಲ್ ಮನವಿ

ವರದಿಗಾರ (ಜ.11): ರಾಜ್ಯದಲ್ಲಿ ಅಪರಾಧ ಕೃತ್ಯಗಳಿಗೆ ಬಿಜೆಪಿಯವರೇ ಪ್ರಚೋದಿಸುತ್ತಿದ್ದಾರೆ. ಕ್ರಿಮಿನಲ್ ರಾಜಕೀಯದಿಂದ  ಬಿಜೆಪಿ  ಹೊರ ಬರಲಿ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣು ಗೋಪಾಲ್‌ ವಿಜಯಪುರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಪಿಎಫ್ಐ ನಿಷೇಧಿಸುವ ಪ್ರಶ್ನೆಯೇ ಇಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ನಡೆಯುತ್ತಿರುವ ಹತ್ಯೆ ಮತ್ತು ಅಪರಾಧ ಪ್ರಕರಣಗಳಲ್ಲಿ ಒಂದು ಕಡೆ ಬಿಜೆಪಿ ಮತ್ತೊಂದು ಕಡೆ ಆರೆಸ್ಸೆಸ್‌ ಇದೆ ಎಂದು ಅವರು ಹೇಳಿದ್ದಾರೆ. ಜನರನ್ನು ಕೋಮು ಆಧಾರದ ಮೇಲೆ ವಿಭಜಿಸಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಜೆಪಿ ಮತ್ತು ಆರೆಸ್ಸೆಸ್‌ ಪ್ರಯತ್ನಿಸುತ್ತಿವೆ . ಆದರೆ ಕರ್ನಾಟಕದ ಜನತೆ ಜಾಣರಾಗಿದ್ದು, ಕೋಮು ವಿಭಜನೆಗೆ ಬೆಲೆ ಕೊಡುವುದಿಲ್ಲವೆಂದು ಅವರು ಹೇಳಿದ್ದಾರೆ.

ಹಿಂದೂ ಮೂಲಭೂತವಾದಿಗಳಾಗಲಿ ಬೇರೆ ಯಾರೇ ಕೋಮವಾದಿಗಳಾಗಿರಲಿ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ  ಸ್ಪಷ್ಟಪಡಿಸಿದ್ದಾರೆ.

 

 

Click to comment

Leave a Reply

Your email address will not be published. Required fields are marked *

To Top
error: Content is protected !!