ರಾಷ್ಟ್ರೀಯ ಸುದ್ದಿ

ದೇಶದಲ್ಲಿ 1975–77ರಲ್ಲಿದ್ದ ತುರ್ತು ಪರಿಸ್ಥಿತಿಯಂತಹ ವಾತಾವರಣವಿದೆ; ಭಯವನ್ನು ಬದಿಗಿಟ್ಟು ಬಿಜೆಪಿ ನಾಯಕರು ಮಾತನಾಡಿ: ಹಿರಿಯ ಬಿಜೆಪಿ ನಾಯಕ ಯಶವಂತ ಸಿನ್ಹಾ ಸಲಹೆ

ವರದಿಗಾರ (ಜ.14): ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿರುದ್ಧ ನಾಲ್ವರು ನ್ಯಾಯಮೂರ್ತಿಗಳು ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಪ್ರಸ್ತುತ ದೇಶದಲ್ಲಿ 1975–77ರಲ್ಲಿ ಇದ್ದ ತುರ್ತು ಪರಿಸ್ಥಿತಿಯಂತಹ ವಾತಾವರಣವಿದೆ ಎಂದು ಬಿಜೆಪಿಯ ಹಿರಿಯ ನಾಯಕ ಯಶವಂತ ಸಿನ್ಹಾ ಆತಂಕ ವ್ಯಕ್ತಪಡಿಸಿದ್ದಾರೆ.

‘ಪ್ರಜಾತಂತ್ರ ಅಪಾಯದಲ್ಲಿದೆ ಎಂದು ನಾಲ್ವರು ನ್ಯಾಯಮೂರ್ತಿಗಳು ಹೇಳುತ್ತಾರೆಂದರೆ ಅವರ ಮಾತನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕು’ ಎಂದು ಸಿನ್ಹಾ ಅಭಿಪ್ರಾಯಪಟ್ಟಿದ್ದು, ಕೇಂದ್ರ ಸಚಿವರು ಮತ್ತು ಪಕ್ಷದ ಸಹೋದ್ಯೋಗಿಗಳು ಭಯವನ್ನು ಬದಿಗಿಟ್ಟು ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ಧೈರ್ಯವಾಗಿ ಮಾತನಾಡುವಂತೆ ಅವರು ಸಲಹೆ ನೀಡಿದ್ದಾರೆ.

ಸಂಸತ್ತು ರಾಜಿ ಮಾಡಿಕೊಂಡರೆ, ಸುಪ್ರೀಂ ಕೋರ್ಟ್‌ ವ್ಯವಸ್ಥಿತವಾಗಿರುವುದಿಲ್ಲ. ಇದರಿಂದ ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಲಿದೆ ಎಂದು ಅವರು ಹೇಳಿದ್ದಾರೆ.

ಸರಕಾರದ ಸಂಪುಟ ಸದಸ್ಯರಲ್ಲಿ ಭಯ ಇದೆ ಎಂಬುದು ನನಗೆ ಗೊತ್ತಿದೆ. ಇದು ಕೂಡ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group