ರಾಜ್ಯ ಸುದ್ದಿ

ಬಿಜೆಪಿಗೆ ಸಾಮೂಹಿಕ ರಾಜೀನಾಮೆ ನೀಡಿದ ಪದಾಧಿಕಾರಿಗಳು!

ವರದಿಗಾರ (ಜ.28): ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜ್ಯದಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಶಾಕ್ ಗಳ ಸುರಿಮಳೆ ಕಾಣಿಸಿಕೊಳ್ಳುತ್ತಿದ್ದು, ಅದರ ಭಾಗವಾಗಿ ಬಳ್ಳಾರಿಯಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಕಾಣಿಸಿಕೊಂಡಿದೆ.

ನಿನ್ನೆಯಷ್ಟೆ ವಿಜಯನಗರ ಶಾಸಕ ಆನಂದ್‍ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ವಿಜಯನಗರ ಬಿಜೆಪಿ ಘಟಕದ ಎಲ್ಲಾ ನಾಯಕರು ಇಂದು ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡಿರುವುದು ವರದಿಯಾಗಿದೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವೇ ಗೌಡರಿಗೆ ಎಲ್ಲಾ ಘಟಕಗಳ ಪದಾಧಿಕಾರಿಗಳು ಇಂದು ಸಾಮೂಹಿಕವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಬಳ್ಳಾರಿ ಬಿಜೆಪಿಯ ಭದ್ರ ಕೋಟೆಯಾಗಿತ್ತು ಎಂದು ಬಿಜೆಪಿ ನಾಯಕರೆ ಹಲವು ಬಾರಿ ಹೇಳಿಕೊಂಡಿದ್ದೂ ಇದೆ. ಸದ್ಯ ಆನಂದ್‍ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆಯಲ್ಲಿ ಭದ್ರಕೋಟೆ ಅಲುಗಾಡತೊಡಗಿದ್ದು, ಈಗ ವಿಜಯನಗರ ಕ್ಷೇತ್ರ ಘಟಕದ ಎಲ್ಲಾ ಪದಾಧಿಕಾರಿಗಳು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅದರ ಬುಡಕ್ಕೇ ಕೊಡಲಿ ಪೆಟ್ಟು ಬಿದ್ದಂತಾಗಿದೆ.

ನಿನ್ನೆ ಆನಂದ್‍ ಸಿಂಗ್ ಅವರು ರಾಣೆಬೆನ್ನೂರಿನಲ್ಲಿದ್ದ ಸ್ಪೀಕರ್ ಕೋಳಿವಾಡ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಅವರನ್ನು ಬೆಂಬಲಿಸಿ ವಿಜಯನಗರ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳೆಲ್ಲ ಸಾಮೂಹಿಕ ರಾಜೀನಾಮೆ ನೀಡಿರುವುದು ಬಳ್ಳಾರಿ ಬಿಜೆಪಿ ಘಟಕಕ್ಕೆ ತೀವ್ರ ಶಾಕ್ ನೀಡಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದರ ಪರಿಣಾಮವನ್ನು ರಾಜ್ಯ ಬಿಜೆಪಿ ನಾಯಕರು ಎದುರಿಸಲಿದ್ದಾರೆ ಎಂದು ಪದಾಧಿಕಾರಿಗಳು ಹೇಳಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group