ರಾಜ್ಯ ಸುದ್ದಿ

ಬಿಜೆಪಿಗೆ ‘ಗುಡ್ ಬೈ’ ಹೇಳಿ ಕಾಂಗ್ರೆಸ್ ನ ‘ಕೈ’ ಹಿಡಿದ ಬಿಜೆಪಿ ನಾಯಕ

ವರದಿಗಾರ (ಜ.6): ಮೈಸೂರು ಬಿಜೆಪಿ ನಾಯಕ ಸಿ.ಎಚ್. ವಿಜಯಶಂಕರ್ ಸೋಮವಾರ ಬಿಜೆಪಿಗೆ ‘ಗುಡ್ ಬೈ’ ಹೇಳಿ ಕಾಂಗ್ರೆಸ್ ‘ಕೈ’ ಹಿಡಿದಿದ್ದಾರೆ.

ಪಕ್ಷದ ಧ್ವಜ ನೀಡುವ ಮೂಲಕ ವಿಜಯ ಶಂಕರ್‌ ರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಬೆಂಗಳೂರಿನಲ್ಲಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಕಾಂಗ್ರೆಸ್‌ನಿಂದ ರಾಜಕಾರಣ ಆರಂಭಿಸಿದ ವಿಜಯಶಂಕರ್, ಬಿಜೆಪಿಯಲ್ಲಿ ಹೆಚ್ಚು ವರ್ಷ ಇದ್ದರು. ಆದರೆ, ಯಾರ ಬಗ್ಗೆಯೂ ಲಘುವಾಗಿ ಮಾತನಾಡಿಲ್ಲ. ಹೀಗಾಗಿ ಅವರಿಗೆ ವೈರಿಗಳಿಲ್ಲ’.‘ಕೈ ಮತ್ತು ಬಾಯಿ ಶುದ್ಧವಾಗಿಟ್ಟುಕೊಂಡಿರುವ ಸಜ್ಜನ ರಾಜಕಾರಣಿ. ಅನಿವಾರ್ಯ ಕಾರಣಗಳಿಂದ ಬಿಜೆಪಿ ಬಿಟ್ಟಿದ್ದಾರೆ. ನನ್ನೊಂದಿಗೆ ನೋವು ಹಂಚಿಕೊಂಡ ಬಳಿಕ ಪಕ್ಷಕ್ಕೆ ಆಹ್ವಾನಿಸಿದೆ’ ಎಂದು ಹೇಳಿದ್ದಾರೆ.

‘ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್‌ಕುಮಾರ್ ಕಟೀಲ್ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಸಂವಿಧಾನ ಬದಲಿಸುವ ಬಗ್ಗೆಯೂ ಮಾತನಾಡುತ್ತಿರುವ ಇವರು ರಾಜಕಾರಣದಲ್ಲಿ ಇರಲು ಯೋಗ್ಯರಲ್ಲ’ ಎಂದು ಬಿಜೆಪಿ ನಾಯಕರನ್ನು ಟೀಕಿಸಿದ್ದಾರೆ.

ಕೆ.ಎಸ್. ಈಶ್ವರಪ್ಪಗೆ ಮೆದುಳು ಮತ್ತು ನಾಲಿಗೆಗೆ ಸಂಪರ್ಕ ಬಿಟ್ಟು ಹೋಗಿದೆ. ಸುಳ್ಳು ಹೇಳುವುದು ಹೇಗೆ ಎಂದು ಕಾರ್ಯಕರ್ತರಿಗೆ ಪಾಠ ಮಾಡುತ್ತಾರೆ. ಇದೆಲ್ಲದರಿಂದ ಬೇಸತ್ತು ವಿಜಯಶಂಕರ್ ಬಿಜೆಪಿ ತೊರೆದಿದ್ದಾರೆ. ಷರತ್ತಿಲ್ಲದೆ ಪಕ್ಷಕ್ಕೆ ಬಂದಿದ್ದಾರೆ. ‘ವಿಜಯಶಂಕರ್ ಮಹಾನ್ ದೈವಭಕ್ತ, ನಾನು ಅಷ್ಟೊಂದು ಅಲ್ಲ. ಇದು ನಮ್ಮಿಬ್ಬರ ನಡುವೆ ಇರುವ ಸಣ್ಣ ವ್ಯತ್ಯಾಸವಷ್ಟೇ. ಅವರ ಪೂಜೆ– ಪುನಸ್ಕಾರಕ್ಕೆ ನಮ್ಮ ಅಭ್ಯಂತರವೇನು ಇಲ್ಲ’ ಎಂದಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group