ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕರೊಂದಿಗೆ ಮೈತ್ರಿ: ಸೋನಿಯಾ ಗಾಂಧಿ

ವರದಿಗಾರ (ಫೆ.8): ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸುತ್ತೇವೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ಪಕ್ಷದ ಸಂಸದಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ರಾಜಕೀಯ ಲಾಭ ಪಡೆಯಲು ಕೇಂದ್ರ ಸರಕಾರ ಸಮಾಜವನ್ನು ಧ್ರುವೀಕರಣ ಮಾಡುತ್ತಿದೆ ಮತ್ತು ಅಲ್ಪಸಂಖ್ಯಾತರ ಮೇಲೆ ಹಿಂಸೆಯನ್ನು ಪ್ರಚೋದಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಕರ್ನಾಟಕದಲ್ಲಿ ಈ ವಾತಾವರಣ ಕಾಣುತ್ತಿದೆ’ ಎಂದೂ ಹೇಳಿದ್ದಾರೆ.
‘ಪಕ್ಷವನ್ನು ಬಲಪಡಿಸಲು ಹೊಸ ಅಧ್ಯಕ್ಷರಾದ ರಾಹುಲ್ ಗಾಂಧಿಯೊಂದಿಗೆ ಶ್ರದ್ಧೆ, ವಿಧೆಯತೆ ಮತ್ತು ಉತ್ಸಾಹದಿಂದ ಕೆಲಸ ಮಾಡಿ’ ಎಂದು ಸಂಸದರಿಗೆ ಸಲಹೆ ನೀಡಿದ ಅವರು, ‘ರಾಹುಲ್ ಈಗ ನನ್ನ ಬಾಸ್ ಕೂಡ ಆಗಿದ್ದಾರೆ’ ಎಂದಿದ್ದಾರೆ.
‘ಹೊಸ ನಾಯಕತ್ವದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ’ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
