ರಾಷ್ಟ್ರೀಯ ಸುದ್ದಿ

ಬಿಜೆಪಿಗೆ ಮತ ನೀಡಿದ್ದು ರಾಮ ಮಂದಿರ ನಿರ್ಮಾಣಕ್ಕೆ ಹೊರತು ತ್ರಿವಳಿ ತಲಾಖ್ ಮಸೂದೆ ಜಾರಿಗಲ್ಲ: ತೊಗಾಡಿಯಾ

ವರದಿಗಾರ (ಫೆ.10): ‘ಜನತೆ ಬಿಜೆಪಿಗೆ ಮತ ನೀಡಿದ್ದು ರಾಮ ಮಂದಿರ ನಿರ್ಮಾಣಕ್ಕೆ ಹೊರತು ತ್ರಿವಳಿ ತಲಾಖ್ ಮಸೂದೆ ಜಾರಿಗಲ್ಲ’ ಎಂದು ಬಿಜೆಪಿಯ ಚುನಾವಣಾ ಗಿಮಿಕ್ ನ ನಕಲಿ ಭರವಸೆಯ ವಿರುದ್ಧ ವಿಶ್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ವಾಗ್ದಾಳಿ ನಡೆಸಿದ್ದಾರೆ.

ಔರಂಗಾಬಾದ್ ಹಾಗೂ ಪರ್ಭಾನಿ ನಗರಗಳ ಎರಡು ದಿನದ ಭೇಟಿಯಲ್ಲಿರುವ ತೊಗಾಡಿಯಾ ಸುದ್ದಿಗಾರರೊಡನೆ ಮಾತನಾಡುತ್ತಿದ್ದ ಸಂದರ್ಭ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ರಾಮ ಮಂದಿರದ ಶೀಘ್ರ ನಿರ್ಮಾಣಕ್ಕೆ ಅನುವು ಮಾಡಿ ಕೊಡಲು ಸರಕಾರ ಕಾನೂನೊಂದನ್ನು ಜಾರಿಗೆ ತರಬೇಕು’. “ತ್ರಿವಳಿ ತಲಾಖ್ ವಿಚಾರದಲ್ಲಿ ಕಾನೂನೊಂದನ್ನು ರಚಿಸುವುದೋ ಅಥವಾ ಬಿಡುವುದೋ ಎಂಬುದು ಸರಕಾರಕ್ಕೆ ಬಿಟ್ಟ ವಿಚಾರ. ಆದರೆ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ಜಾರಿಗೆ ತರಲೇ ಬೇಕು’ ಎಂದು ಅವರು ಹೇಳಿದ್ದಾರೆ.

‘ನಮಗೆ ನ್ಯಾಯಾಂಗದ ಮೇಲೆ ನಂಬಿಕೆಯಿದೆ. ಆದರೆ ರಾಮ ಮಂದಿರ ನಿರ್ಮಾಣವಾಗದೇ ಇರುವುದರಿಂದ ಕಾನೂನು ರಚಿಸಿ ಮಸೀದಿ ಹತ್ತಿರದಲ್ಲಿರದಂತೆ ಮಂದಿರ ನಿರ್ಮಾಣವಾಗಬೇಕು’.

ಹಿಂದೂ ಸಮಾಜ ಬಹಳ ಸಮಯದಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾದು ಕುಳಿತಿದೆ. ಬಾಬರಿ ಮಸೀದಿ-ರಾಮ ಜನ್ಮಭೂಮಿ ವಿವಾದದ ಮೇಲಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 14ಕ್ಕೆ ಮುಂದೂಡಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

To Top
error: Content is protected !!
WhatsApp chat Join our WhatsApp group