ರಾಜ್ಯ ಸುದ್ದಿ

ಸಿದ್ದರಾಮಯ್ಯ ಸರಕಾರದಿಂದ ಪ್ರಧಾನಿ ಮೋದಿ ಪಾಠ ಕಲಿಯಲಿ: ರಾಹುಲ್ ಗಾಂಧಿ ಸಲಹೆ

ವರದಿಗಾರ (ಫೆ.13): ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಾ, ‘ರೈತರ ಪರ, ಬಡವರ ಪರ ಕೆಲಸ ಮಾಡುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಸರಕಾರದಿಂದ ನರೇಂದ್ರ ಮೋದಿ ಪಾಠ ಕಲಿಯಲಿ’ ಎಂದು ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಹಮ್ಮಿಕೊಂಡಿರುವ ‘ಜನಾಶೀರ್ವಾದ ಯಾತ್ರೆ’ಗಾಗಿ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಪರಿಶಿಷ್ಟ ಪಂಗಡದ ಸಮಾವೇಶದಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಾ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.

ರಾಜ್ಯದಲ್ಲಿ ಬಡವರಿಗಾಗಿ ‘ಇಂದಿರಾ ಕ್ಯಾಂಟೀನ್’ ಪ್ರಾರಂಭಿಸಲಾಗಿದೆ. ಮೋದಿ ನೇತೃತ್ವದ ಕೇಂದ್ರ ಸರಕಾರ ನಿಜವಾಗಿಯೂ ಬಡವರ ಪರವಾಗಿದ್ದರೆ ಹಸಿದವರಿಗಾಗಿ ದೇಶದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಬೇಕೆಂದು ಹೇಳಿದ್ದಾರೆ.

ಉದ್ಯೋಗ ಸೃಷ್ಟಿ ಕರ್ನಾಟಕದಲ್ಲಿ ಮಾಡಿದ್ದಾರೆ. ಆದರೆ ದೇಶದಲ್ಲಿ ಪ್ರತಿವರ್ಷ 2 ಕೋಟಿ ಉದ್ಯೋಗ ಕೊಡುವ ಮಾತಿನಂತೆ ಮೋದಿ ನಡೆದುಕೊಂಡಿಲ್ಲ ಎಂದರು.

ಪರಿಶಿಷ್ಟರ ಅಭಿವೃದ್ಧಿಗಾಗಿ ಸಿದ್ದರಾಮಯ್ಯ 27,700 ಕೋಟಿ ಅನುದಾನ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಇಡೀ ದೇಶಕ್ಕೆ 54 ಸಾವಿರ ಕೋಟಿ ನೀಡಿದೆ. ಕೇಂದ್ರದ ಒಟ್ಟು ಅನುದಾನದಲ್ಲಿ ಶೇ 50ರಷ್ಟು ಕರ್ನಾಟಕ ಒಂದೇ ರಾಜ್ಯ ನೀಡಿದೆ ಎಂದು ಹೇಳಿ ರಾಜ್ಯ ಕಾಂಗ್ರೆಸ್ ಸರಕಾರದ ಬೆನ್ನು ತಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!