ರಾಜ್ಯ ಸುದ್ದಿ

ಕೋಮುವಾದಿ ಬಿಜೆಪಿಯನ್ನು ಮಣಿಸಲು ರಾಷ್ಟ್ರಮಟ್ಟದಲ್ಲಿ ಜಾತ್ಯಾತೀತ ಶಕ್ತಿಗಳು ಒಗ್ಗೂಡುವ ಅಗತ್ಯವಿದೆ; ಮುಖ್ಯಮಂತ್ರಿ ಸಿದ್ದರಾಮಯ್ಯ

“ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ”

ವರದಿಗಾರ (ಮಾ.05): ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರದು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಥಳೀಯ ಪಕ್ಷಗಳೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದ್ದು ಈಶಾನ್ಯ ರಾಜ್ಯಗಳಲ್ಲಿ ಗೆಲುವಿಗೆ ಕಾರಣ. ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಬಿಜೆಪಿಗೆ ರಾಜ್ಯದ ಜನ ಮತ ಹಾಕುವುದಿಲ್ಲ. ಕೋಮುವಾದಿ ಬಿಜೆಪಿಯನ್ನು ಮಣಿಸಲು ರಾಷ್ಟ್ರಮಟ್ಟದಲ್ಲಿ ಜಾತ್ಯಾತೀತ ಶಕ್ತಿಗಳು ಒಗ್ಗೂಡುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ವರದಿಗಾರರರೊಂದಿಗೆ ಅವರು ಮಾತನಾಡುತ್ತಾ, ಜೆಡಿಎಸ್ ಮತ್ತು ಬಿಎಸ್ಪಿ ಪಕ್ಷಗಳ ಹೊಂದಾಣಿಕೆಯಿಂದ ಯಾವುದೇ ಪರಿಣಾಮ ಬೀರದು. ಕೋಮುವಾದಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ದೆಹಲಿಗೆ ಹೊರಟಿದ್ದೇನೆ. ಪಕ್ಷದ ಅಭ್ಯರ್ಥಿ ಯಾರು ಎಂಬುದು ಕೂಡ ನಿರ್ಧಾರ ಆಗಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ನ ಅಗತ್ಯವಿಲ್ಲ ಎಂದೂ ಹೇಳಿದ್ದಾರೆ.

ರಾಹುಲ್ ಗಾಂಧಿ ಮಾರ್ಚ್ 21ರಿಂದ 25ರವರೆಗೆ ಮೈಸೂರು ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 25 ರಂದು ಮೈಸೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ ಎಂದಿದ್ದಾರೆ.

To Top
error: Content is protected !!
WhatsApp chat Join our WhatsApp group