ರಾಜ್ಯ ಸುದ್ದಿ

ಶವ ನೀಡಲು ಹಣಕ್ಕಾಗಿ ಪೀಡಿಸಿದರೆ ಕ್ರಿಮಿನಲ್ ಮೊಕದ್ದಮೆ: ಖಾಸಗಿ ಆಸ್ಪತ್ರೆಗಳಿಗೆ ಸಿದ್ದರಾಮಯ್ಯ ಎಚ್ಚರಿಕೆ

ವರದಿಗಾರ (ಮಾ.11): ಶವ ನೀಡಲು ಹಣಕ್ಕಾಗಿ ಸತಾಯಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

‘ಯಾವುದೇ ಸನ್ನಿವೇಶದಲ್ಲಿ ಆಸ್ಪತ್ರೆಗಳಲ್ಲಿ ಸಾವು ಸಂಭವಿಸಿದಾಗ ಮೊದಲು ಶವವನ್ನು ಸಂಬಂಧಿಕರಿಗೆ ನೀಡಬೇಕು. ಅದೆಷ್ಟೇ ಶುಲ್ಕ ಪಾವತಿ ಬಾಕಿ ಇರಲಿ. ಆರ್ಥಿಕ ಅಥವಾ ಇನ್ನಾವುದೋ ಕಾರಣಕ್ಕೆ ಶವ ನೀಡಲು ನಿರಾಕರಿಸುವಂತಿಲ್ಲ’ ಎಂದು ಅವರು ತಾಕೀತು ಮಾಡಿದ್ದಾರೆ.

‘ರಾಜ್ಯದ ಎಲ್ಲ ಜನರಿಗೆ ಗುಣಮಟ್ಟದ ಚಿಕಿತ್ಸೆ ಕೊಡಿಸುವ ಉದ್ದೇಶದಿಂದ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ 1.43 ಕೋಟಿ ಕುಟುಂಬಗಳಿದ್ದು, ಬಿಪಿಎಲ್‌ ಕುಟುಂಬಗಳಿಗೆ ಉಚಿತ ಹಾಗೂ ಎಪಿಎಲ್‌ ಕುಟುಂಬಗಳಿಗೆ ಶೇ 30ರಷ್ಟು ರಿಯಾಯಿತಿ ದರದಲ್ಲಿ ಆರೋಗ್ಯ ಸೇವೆ ಸಿಗಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯ ಇಲ್ಲದಿದ್ದರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಸರ್ಕಾರವೇ ಹಣ ಭರಿಸಲಿದೆ’ ಎಂದೂ ಅವರು ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group