ರಾಜ್ಯ ಸುದ್ದಿ

ಅಮಿತ್ ಶಾ, ಪ್ರಧಾನಿ ಮೋದಿ ಯಾರೇ ರಾಜ್ಯಕ್ಕೆ ಬಂದರೆ ಪ್ರಯೋಜನವಾಗದು: ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ

ವರದಿಗಾರ (ಮಾ.03): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅಥವಾ ಇನ್ನಿತರ ಯಾರೇ ರಾಜ್ಯಕ್ಕೆ ಬಂದರೂ ಪ್ರಯೋಜನವಾಗದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಯಾಗುವುದರ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅದಲ್ಲದೆ ಜೆಡಿಎಎಸ್‌ನ ಎಚ್.ಡಿ. ಕುಮಾರಸ್ವಾಮಿ ಮತ್ತು ದೇವೇಗೌಡರ ಯಾವ ಪ್ರಭಾವವೂ ನಡೆಯದು ಎಂದು ಹೇಳಿದ್ದಾರೆ. ಮತ್ತೊಮ್ಮೆ ಅಧಿಕಾರಕ್ಕೆ ಬರುವುದೇ ನಮ್ಮ ಮೊದಲ ಆದ್ಯತೆ. ಆಮೇಲೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚರ್ಚಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

To Top
error: Content is protected !!
WhatsApp chat Join our WhatsApp group