ರಾಜ್ಯ ಸುದ್ದಿ

ಬಿಜೆಪಿಯದ್ದು ಡೋಂಗಿ ಹಿಂದುತ್ವ: ಪ್ರಮೋದ್ ಮುತಾಲಿಕ್

ತಾಕತ್ತಿದ್ದರೆ ಕೇಂದ್ರ ಸರಕಾರ ಗೋಮಾಂಸ ರಫ್ತನ್ನು ರದ್ದುಪಡಿಸಲಿ; ಮುತಾಲಿಕ್ ಸವಾಲು

ವರದಿಗಾರ (ಎ.04): ಬಿಜೆಪಿದ್ದು ಡೋಂಗಿ ಹಿಂದುತ್ವ. ಅವರಿಗೆ ಹಿಂದುತ್ವದ ಬಗ್ಗೆ ನೈಜ ಕಾಳಜಿಯೇ ಇಲ್ಲ. ಮತಗಳಿಕೆಯ ಉದ್ದೇಶದಿಂದ ಮಾತ್ರ ಬಿಜೆಪಿಯವರು ಹಿಂದುತ್ವದ ಬಗ್ಗೆ ಪುಂಗಿ ಊದುತ್ತಾರೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬಿಜೆಪಿ ವಿರುದ್ಧ ಚಾಟಿ ಬೀಸಿದ್ದಾರೆ.

ಅವರು ಚಿಕ್ಕಮಂಗಳೂರಿನಲ್ಲಿ ಮಧ್ಯ ಕರ್ನಾಟಕ ಭಾಗದ ಶಿವಸೇನೆ ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಗೋ ರಕ್ಷಣೆಯ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. ಕೇಂದ್ರದಲ್ಲಿ ಬಿಜೆಪಿಯೇ ಆಡಳಿತ ನಡೆಸುತ್ತಿದೆ. ವಿಶ್ವದಲ್ಲೇ ಅತೀ ಹೆಚ್ಚು ಗೋಮಾಂಸ ರಫ್ತು ಮಾಡುವ ದೇಶ ಭಾರತವಾಗಿದೆ. ಆಡಳಿತದಲ್ಲಿರುವ ಬಿಜೆಪಿ ನೇತೃತ್ವದ ಬಿಜೆಪಿ ಸರಕಾರಕ್ಕೆ ತಾಕತ್ತಿದ್ದರೆ ಗೋಮಾಂಸ ರಫ್ತನ್ನು ರದ್ದುಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುತ್ವವನ್ನು ಬಳಕೆಮಾಡಿಕೊಂಡು ಹಿಂದುಗಳಿಗೆ ಅನ್ಯಾಯ ಮಾಡುತ್ತಿದೆ. ಆದರೆ ಶ್ರೀರಾಮ ಸೇನೆ ಹಿಂದುತ್ವಕ್ಕಾಗಿ ಯಾವುದೇ ಹೋರಾಟ ಮಾಡಲು ಸಿದ್ದವಾಗಿದೆ., ದತ್ತಪೀಠದ ಹೆಸರಿನಲ್ಲಿ ರಾಜಕೀಯ ಸ್ಥಾನಮಾನ ಪಡೆದ ಸ್ಥಳೀಯ ಶಾಸಕರು ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ದತ್ತಪೀಠ ವಿವಾದವನ್ನು ಬಗೆಹರಿಸುವುದಾಗಿ ಹೇಳುತ್ತಿದ್ದಾರೆ. ಈ ಹಿಂದೆ ರಾಜ್ಯದಲ್ಲಿ 5 ವರ್ಷ ಬಿಜೆಪಿ ಸರಕಾರ ಆಡಳಿತ ನಡೆಸಿತ್ತು. ಆಗ ಅವರು ಸಚಿವರೂ ಆಗಿದ್ದರು. ಆಗ ಏನೂ ಮಾಡದ ಈ ಶಾಸಕರು ಈಗ ಚುನಾವಣೆಯ ಸಂದರ್ಭದಲ್ಲಿ ದತ್ತಪೀಠದ ವಿಚಾರ ಪ್ರಸ್ತಾಪಿಸಿ ಮತ್ತೊಮ್ಮೆ ಜನರಿಗೆ ಮಂಕುಬೂದಿ ಎರಚಲು ಹೊರಟಿದ್ದಾರೆ ಎಂದು ಚಿಕ್ಕಮಗಳೂರು ಕ್ಷೇತ್ರದ ಹಾಲಿ ಶಾಸಕ ಸಿ.ಟಿ.ರವಿ ವಿರುದ್ಧ ಕುಟುಕಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group