ರಾಜ್ಯ ಸುದ್ದಿ

ಕೋಮುವಾದಿಗಳಿಗೆ ಕಡಿವಾಣ ಹಾಕುವ ಮೂಲಕ ಸೌಹಾರ್ದಯುತ, ಪ್ರೀತಿಯುತ ದೇಶವನ್ನಾಗಿ ಮಾಡಬೇಕು: ಪ್ರಕಾಶ್ ರೈ

ವರದಿಗಾರ (ಎ.10): ಕೋಮುವಾದಿಗಳಿಗೆ ಕಡಿವಾಣ ಹಾಕುವ ಮೂಲಕ ಸೌಹಾರ್ದಯುತ, ಪ್ರೀತಿಯುತ ದೇಶವನ್ನಾಗಿ ಮಾಡಬೇಕು ಎಂದು ಬಹುಭಾಷಾ ನಟ, ಚಿಂತಕ ಪ್ರಕಾಶ್ ರೈ ಹೇಳಿದ್ದಾರೆ.

ಅವರು ಸ್ವಾತಂತ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಶತಮಾನೋತ್ಸವ ಸಮಿತಿಯು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ‘ದೊರೆಸ್ವಾಮಿ ಶತಮಾನೋತ್ಸವ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಸಮುದ್ರ, ಶಿಖರ, ಜೀವನದಿ ಮುಂದೆ ನಿಂತರೆ ನನಗೆ ಮಾತು ಬರುವುದಿಲ್ಲ. ದೊರೆಸ್ವಾಮಿ ಅವರ ಬಗ್ಗೆ ಹೇಳುವಷ್ಟು ದೊಡ್ಡವನಲ್ಲ. ಅವರ ವಯಸ್ಸಿನ ಅರ್ಧದಷ್ಟು ವಯಸ್ಸು ನನಗೆ ಆಗಿದೆ ಎಂದರು.

ಬಂಡೀಪುರಕ್ಕೆ ಹೋಗಿದ್ದಾಗ ದೊಡ್ಡ ಸಂಪಿಗೆ ಮರ ನೋಡಿದ್ದೆ. ಆ ಮರ ತನ್ನ ಬದುಕಿನಲ್ಲಿ ಎಷ್ಟೆಲ್ಲಾ ವಸಂತ, ಮಳೆಯನ್ನು ನೋಡಿದೆ. ಪ್ರಾಣಿ, ಪಕ್ಷಿಗಳಿಗೆ ಆಶ್ರಯ ನೀಡಿರುತ್ತದೆ ಎಂಬ ಯೋಚನಾ ಲಹರಿಗೆ ಜಾರಿದ್ದೆ. ಮರದ ಕೆಳಗೆ ಹೋದರೆ ತಾಯಿಯ ಮಡಿಲಿನಂತಹ ಸಾಂತ್ವನ ಸಿಗುತ್ತದೆ. ನಂಬಿಕೆ, ವಿಶ್ವಾಸ ಸಿಗುತ್ತದೆ. ಅದೇ ರೀತಿ ದೊರೆಸ್ವಾಮಿ. ದೊರೆಸ್ವಾಮಿ ಅವರ ಜತೆ ಒಟನಾಟ ಹೆಚ್ಚಾಗಿಲ್ಲ. ಆದರೆ, ದೂರದಿಂದ ನೋಡಿ ಕಲಿತಿದ್ದೇನೆ ಏಕಲವ್ಯನಂತೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ಈ ಚುನಾವಣೆಯು ಕರ್ನಾಟಕ v/s ಮೋದಿ ನಡುವಿನದ್ದು. ಮೋದಿ ಅವರನ್ನು ಪ್ರಧಾನಿ ಗಾದಿಯಿಂದ ಕೆಳಗಿಳಿಸುವ ಕೆಲಸ ಮಾಡಲು ನಿರ್ಧರಿಸಲಾಗಿದೆ ಎಂದು ಎಚ್.ಎಸ್.ದೊರೆಸ್ವಾಮಿ ಹೇಳಿದರು.

To Top
error: Content is protected !!
WhatsApp chat Join our WhatsApp group