ರಾಜ್ಯ ಸುದ್ದಿ

ಶೋಭಾ ಕರಂದ್ಲಾಜೆಗೆ ಟಿಕೆಟಿಲ್ಲ: ಯಡಿಯೂರಪ್ಪ ಸ್ಪಷ್ಟನೆ

2 ಕೋಟಿಗೆ ಬಿಜೆಪಿಯ ಟಿಕೆಟ್ ಮಾರಾಟವಾಗಿದೆ; ಎನ್.ಆರ್ ರಮೇಶ್ ಗಂಭೀರ ಆರೋಪ

ವರದಿಗಾರ (ಎ.10): 2018ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಸದೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸಂಸದ ಶ್ರೀರಾಮುಲು, ನನ್ನನ್ನು ಬಿಟ್ಟು ಬೇರೆ ಯಾವುದೇ ಸಂಸದರಿಗೆ ವಿಧಾನಸಭಾ ಚುನಾವಣೆ ಟಿಕೆಟ್ ನೀಡುವುದಿಲ್ಲ. ಶೋಭಾ ‌‌ಕರಂದ್ಲಾಜೆ ಸೇರಿದಂತೆ ಬೇರೆ ಯಾವುದೇ ಸಂಸದರಿಗೆ ಟಿಕೆಟ್ ಕೊಡುವುದು ಬೇಡ ಎಂದು ವರಿಷ್ಠರಿಗೆ ತಿಳಿಸಿರುವುದಾಗಿ ಯಡಿಯೂರಪ್ಪ ಹೇಳಿಕೊಂಡಿದ್ದಾರೆ.

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿಯ ನಿಲುವನ್ನು ಖಂಡಿಸಿದ ಟಿಕೆಟ್ ಆಕಾಂಕ್ಷಿ ಎನ್.ಆರ್ ರಮೇಶ್, ಟಿಕೆಟ್ 2 ಕೋಟಿಗೆ ಮಾರಾಟವಾಗಿದೆ ಎಂದು ಬಿಜೆಪಿ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ.

 

To Top
error: Content is protected !!
WhatsApp chat Join our WhatsApp group