ಜಿಲ್ಲಾ ಸುದ್ದಿ

ಹಿಂದೂ ಕಾರ್ಯಕರ್ತರ ಹತ್ಯೆಯ ರೂವಾರಿಗಳ ಬಗ್ಗೆ ಅರಿವಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿಯನ್ನು ಬಂಧಿಸಿ ತನಿಖೆಗೊಳಪಡಿಸಿ : ಎಸ್ ಡಿ ಪಿ ಐ

ವರದಿಗಾರ ( ಎ 18) : ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಕೆ.ಪಿ ಜಗದೀಶ್ ಅಧಿಕಾರಿ ಮೂಡಬಿದ್ರೆ ಕ್ಷೇತ್ರದ ಬಿಜೆಪಿಯ ಟಿಕೆಟ್ ಕೈ ತಪ್ಪಿದಾಗ ಬೇಸರಗೊಂಡ ಅವರು ಅವರ ಮನಸ್ಸಿನ ಅಂತರಾಳದಲ್ಲಿದ್ದ ಸತ್ಯ ವಿಚಾರಗಳನ್ನು ಬಹಿರಂಗ ಗೊಳಿಸುವ ಮೂಲಕ ಹತ್ಯೆಯ ನೈಜ ಸೂತ್ರಧಾರಿಗಳ ಬಗ್ಗೆ ಹೇಳಿರುವುದು ಸಂಘಪರಿವಾರ ಜಿಲ್ಲೆಯಲ್ಲಿ ನಡೆಸಿರುವ ಹತ್ಯೆಗಳಿಗೆ ಸಾಕ್ಷಿಯಾಗಿದೆ.

ಜಿಲ್ಲೆಯಲ್ಲಿ ಸಂಘಪರಿವಾರದ ಕಾರ್ಯಕರ್ತರ ಹತ್ಯೆಯ ಹಿಂದಿರುವವರ ಬಗ್ಗೆ ಬಹಿರಂಗ ಪಡಿಸುವೆ,ಹತ್ಯೆಯ ಹಿಂದೆ ಯಾರಿದ್ದಾರೆ ಎಂಬುದು ನನಗೆ ಸ್ಪಷ್ಟವಾಗಿ ತಿಳಿದಿದೆ ಈ ಬಗ್ಗೆಯೂ ಮುಂದಿನ ದಿನಗಳಲ್ಲಿ ಬಹಿರಂಗ ಪಡಿಸುವೆ ಅದಕ್ಕೆ ನನಗೆ ಯಾವುದೇ ಭಯವಿಲ್ಲ ಎಂದು ಜಗದೀಶ್ ಅಧಿಕಾರಿ ಹೇಳಿದ್ದು ಇದು ಹತ್ಯಾ ಪ್ರಕರಣದ ತನಿಖೆಗೆ ಪುಷ್ಟಿ ನೀಡಿದಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಎಲ್ಲಾ ಹತ್ಯೆಯ ಹಿಂದೆ ಸಂಘಪರಿವಾರ ಇದೆ ಎಂದು ಬ್ನಮ್ಮ ಪಕ್ಷ ಕಳೆದ ಹಲವಾರು ವರ್ಷಗಳಿಂದ ಹೇಳುತ್ತಾ ಬಂದಿದೆ.  ಆದರೆ ಇಲ್ಲಿನ ಸರಕಾರ ಮತ್ತು ಪೊಲೀಸ್ ಇಲಾಖೆ ಸಂಘಪರಿವಾರದ ನಾಯಕರನ್ನು ರಕ್ಷಿಸುವ ನಿಟ್ಟಿನಲ್ಲಿ ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸಿ ಸುಳ್ಳು ಆರೋಪಗಳನ್ನು ಹಾಕಿ ಜೈಲಿನಲ್ಲಿ ಕಾಲ ಕಳೆಯುವಂತೆ ಮಾಡಿದೆ ಇದೀಗ ಹತ್ಯೆಯ ಹಿಂದಿರುವ ಸಂಘಪರಿವಾರದ ಷಡ್ಯಂತ್ರಗಳು ಒಂದೊಂದಾಗಿ ಬಹಿರಂಗಗೊಳ್ಳುತ್ತಿದೆ.

ಆದುದರಿಂದ ಪೊಲೀಸ್ ಇಲಾಖೆ ಕೂಡಲೇ ಜಗದೀಶ್ ಅಧಿಕಾರಿಯನ್ನು ಬಂಧಿಸಿ, ಸಮಗ್ರ ತನಿಖೆಗೆ ಒಳಪಡಿಸಿ ಹತ್ಯೆಯ ಹಿಂದಿರುವ ಎಲ್ಲಾ ಸಂಘಪರಿವಾರದ ವ್ಯಕ್ತಿಗಳನ್ನು ಬಹಿರಂಗ ಪಡಿಸಿ  ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಆಗ್ರಹಿಸಿದ್ದಾರೆ ಎಂದು ಪಕ್ಷದ ಜಿಲ್ಲಾ ಮಾಧ್ಯಮ ಸಂಯೋಜಕರಾ ಅಶ್ರಫ್ ಮಂಚಿಯವರು ಬಿಡುಗಡೆಗೊಳಿಸಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group