ರಾಷ್ಟ್ರೀಯ ಸುದ್ದಿ

ಅಸಾರಾಂ ಬಾಪು ಅತ್ಯಾಚಾರ ಪ್ರಕರಣ: ಇಂದು ತೀರ್ಪು

ವರದಿಗಾರ (ಎಪ್ರಿಲ್.25): ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರಪ್ರದೇಶದ ಷಹಜಹಾನ್‌ಪುರದ ಬಾಲಕಿ ಮೇಲೆ ಸ್ವಯಂ ಘೋಷಿತ ದೇವಮಾನವ  ಅಸಾರಾಂ ಬಾಪು ಅತ್ಯಾಚಾರವೆಸಗಿದ ಪ್ರಕರಣದ ತೀರ್ಪು ಇಂದು ಪ್ರಕಟಗೊಳ್ಳಲಿದೆ.

2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ದೂರು ದಾಖಲಿಸಿದ್ದಳು. ರಾಜಸ್ಥಾನ ಹೈಕೋರ್ಟ್ ನಿರ್ದೇಶನದಂತೆ, ಜೋಧಪುರ ಕೇಂದ್ರ ಕಾರಾಗೃಹದ ಆವರಣದಲ್ಲಿ ವಿಚಾರಣಾ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

ಪ್ರಕರಣಕ್ಕೆ ಸಂಬಂಧಿಸಿ 2013ರ ಸೆಪ್ಟೆಂಬರ್ 1ರಂದು ಇಂದೋರ್‌ನಲ್ಲಿ ಅಸಾರಾಂ ಅವರನ್ನು ಬಂಧಿಸಿ ಜೋಧಪುರಕ್ಕೆ ಕರೆತರಲಾಗಿತ್ತು. ಸೆಪ್ಟೆಂಬರ್ 2ರಿಂದ ನ್ಯಾಯಾಂಗ ವಶದಲ್ಲಿದ್ದಾರೆ.

ಅಸಾರಾಂ ಜತೆಗೆ ಶಿವ, ಶಿಲ್ಪಿ, ಶರದ್ ಹಾಗೂ ಪ್ರಕಾಶ್ ವಿರುದ್ಧ ಭಾರತೀಯ ದಂಡಸಂಹಿತೆ, ಪೋಕ್ಸೊ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 2013ರ ನವೆಂಬರ್‌ 6ರಂದು ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.

To Top
error: Content is protected !!
WhatsApp chat Join our WhatsApp group