ರಾಜ್ಯ ಸುದ್ದಿ

ರೈತರ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ

ವರದಿಗಾರ (26.5.18):  ರೈತರ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿರುವ 53,000 ಕೋಟಿ ಮೊತ್ತದ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಶುಕ್ರವಾರ ವಿಶ್ವಾಸಮತ ಯಾಚಿಸಿ ಮಾತನಾಡಿದ ಅವರು, ‘ಸಾಲ ಮನ್ನಾ ಮಾಡುವುದಿಲ್ಲ ಎಂದು ಹೇಳಿಲ್ಲ. ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬಂದಿದ್ದರೆ 24 ಗಂಟೆಗಳಲ್ಲೇ  ರೈತರ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡುತ್ತಿದ್ದೆ. ಈಗ ಇರುವುದು ಸಮ್ಮಿಶ್ರ ಸರ್ಕಾರ. ಹಾಗಾಗಿ ಏಕಾಂಗಿಯಾಗಿ ಘೋಷಣೆ ಮಾಡಲು ಆಗುವುದಿಲ್ಲ. ಕಾಂಗ್ರೆಸ್‌ ನಾಯಕರ ಜೊತೆಗೆ ಚರ್ಚಿಸಬೇಕಿದೆ’ ಎಂದು ಹೇಳಿದ್ದಾರೆ.

‘ಸಾಲ ಮಾಡಿ ಕಾರ್ಯಕ್ರಮಗಳ ಅನುಷ್ಠಾನ ಮಾಡುವುದಿಲ್ಲ. ಕಾಂಗ್ರೆಸ್‌ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳು ಹಾಗೂ ಆ ಪಕ್ಷದ ಪ್ರಣಾಳಿಕೆಯಲ್ಲಿನ ಉತ್ತಮ ವಿಷಯಗಳನ್ನು ಅನುಷ್ಠಾನಗೊಳಿಸುತ್ತೇನೆ’ ಎಂದೂ ಹೇಳಿದ್ದಾರೆ.

To Top
error: Content is protected !!
WhatsApp chat Join our WhatsApp group