ರಾಜ್ಯ ಸುದ್ದಿ

ರಾಜಕೀಯ ದ್ವೇಷ ಸಾಧನೆಗೆ ಮೋದಿ ಸರಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ: ಸಿದ್ದರಾಮಯ್ಯ

ಯಾವುದೇ ಬೆದರಿಕೆಗೆ ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ: ಮೋದಿಗೆ ಪರೋಕ್ಷ ಎಚ್ಚರಿಕೆ

ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ

ವರದಿಗಾರ( ಜೂ.1): ಮಾಜಿ ಇಂಧನ ಸಚಿವ, ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್‌ ಆಪ್ತರ ಮನೆಗಳ ಮೇಲೆ ನಡೆಯುತ್ತಿರುವ ಸಿಬಿಐ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು‌ ಖಂಡನೀಯ ಎಂದು ಹೇಳಿದ್ದಾರೆ.

ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದ್ದು, ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪರೋಕ್ಷವಾಗಿ ಎಚ್ಚರಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಅವರ ಜೊತೆ ಕಾಂಗ್ರೆಸ್ ಪಕ್ಷವಿದೆ ಎಂದು ಟ್ವೀಟ್ ಮೂಲಕ ಅವರು ಹೇಳಿದ್ದಾರೆ.

To Top
error: Content is protected !!
WhatsApp chat Join our WhatsApp group