ರಾಷ್ಟ್ರೀಯ ಸುದ್ದಿ

 ಬಿಜೆಪಿಯನ್ನು ಸೋಲಿಸಲು ಬಿಎಸ್ಪಿ ಜತೆ ಮೈತ್ರಿಗೆ ಮುಂದಾದ ಕಾಂಗ್ರೆಸ್

ವರದಿಗಾರ (ಜೂ. 2): ಮಧ್ಯಪ್ರದೇಶದಲ್ಲಿ ವರ್ಷಾಂತ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ತಯಾರಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ಬಹುಜನ ಸಮಾಜ ಪಕ್ಷ(ಬಿಎಸ್ಪಿ) ದ ಅಧಿನಾಯಕಿ ಮಾಯಾವತಿಯವರನ್ನು ಭೇಟಿ ಮಾಡಿ, ಚುನಾವಣಾ ಪೂರ್ವ ಮೈತ್ರಿ ಸಾಧ್ಯತೆ ಬಗ್ಗೆ ಚರ್ಚಿಸಿದ್ದಾರೆ.

ಇದು 15 ವರ್ಷಗಳ ಬಿಜೆಪಿ ಆಡಳಿತವನ್ನು ಕೊನೆಗೊಳಿಸುವ ನಿಟ್ಟಿನ ನಿರ್ಣಾಯಕ ಹೋರಾಟದಲ್ಲಿ ವಿರೋಧಿ ರಂಗವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಲಾಗುತ್ತಿದೆ.ಆದರೆ ಈ ಚರ್ಚೆಗಳು ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆದರೆ ಉಭಯ ಪಕ್ಷಗಳು ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಈ ಚುನಾವಣೆಯನ್ನು 2019ರ ಸಾರ್ವತ್ರಿಕ ಚುನಾವಣೆಯ ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ.

ಕರ್ನಾಟಕದಲ್ಲಿ ಜೆಡಿಎಸ್ ಜತೆ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಪಕ್ಷ ಇದೀಗ ಮುಂದಿನ ಹೆಜ್ಜೆಯಾಗಿ ಬಿಸ್ಪಿ ಜತೆಗೆ ಹೊಂದಾಣಿಕೆಗೆ ಮುಂದಾಗಿದೆ. ಕಳೆದ 20 ವರ್ಷಗಳಲ್ಲಿ ಸುಮಾರು ಶೇಕಡ 7ರಷ್ಟು ಮತಗಳನ್ನು ಗಳಿಸುತ್ತಿರುವ ಬಿಎಸ್ಪಿ ಜತೆಗಿನ ಮೈತ್ರಿ, ಪಕ್ಷಕ್ಕೆ ಲಾಭವಾಗಲಿದೆ ಎಂಬ ಲೆಕ್ಕಾಚಾರ ಕಾಂಗ್ರೆಸ್ ಪಕ್ಷದ್ದು. ಕಾಂಗ್ರೆಸ್ ಮತಗಳಿಕೆ ರಾಜ್ಯದಲ್ಲಿ ಶೇಕಡ 36ರಷ್ಟಿದ್ದು, ಬಿಜೆಪಿ ಶೇಕಡ 45ರಷ್ಟು ಮತಗಳನ್ನು ಹೊಂದಿದೆ. ಉಭಯ ಪಕ್ಷಗಳ ನಡುವಿನ ಮೈತ್ರಿ ಬಿಜೆಪಿಗೆ ತೀವ್ರ ಪೈಪೋಟಿ ನೀಡಲು ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

To Top
error: Content is protected !!
WhatsApp chat Join our WhatsApp group