ಸುತ್ತ-ಮುತ್ತ

ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನದ ಮೂಲಕ ರಾಜ್ಯಕ್ಕೆ ಟಾಪರ್: ವಿದ್ಯಾರ್ಥಿಯನ್ನು ಸನ್ಮಾನಿಸಿ ಅಭಿನಂದಿಸಿದ ಪಾಪ್ಯುಲರ್ ಫ್ರಂಟ್

ವರದಿಗಾರ (ಜೂ.8): ಕಳೆದ ಸಾಲಿನ  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮರುಮೌಲ್ಯಮಾಪನದ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ತಂದು ಕೊಟ್ಟ ಬೆಳಗಾವಿ ಕ್ಯಾಂಪ್‌ನ ಸೇಂಟ್‌ ಕ್ಸೇವಿಯರ್‌ ಪ್ರೌಢ ಶಾಲೆಯ ಇಂಗ್ಲಿಷ್‌ ಮಾಧ್ಯಮದ ವಿದ್ಯಾರ್ಥಿ ಮೊಹಮ್ಮದ್‌ ಕೈಫ್‌ ಮುಲ್ಲಾ ರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳಗಾವಿ ಸಮಿತಿ ಅಭಿನಂದಿಸಿ ಸನ್ಮಾನಿಸಿದೆ.

625ಕ್ಕೆ 624 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಮತ್ತು ರಾಜ್ಯಕ್ಕೆ 2ನೇ ಸ್ಥಾನ ಗಳಿಸಿದ್ದರು. ಪ್ರಥಮ ಭಾಷೆ ಇಂಗ್ಲಿಷ್‌ನಲ್ಲಿ 125ಕ್ಕೆ 125, ದ್ವಿತೀಯ ಭಾಷೆ ಕನ್ನಡ ಸೇರಿದಂತೆ ಇತರ ಎಲ್ಲ ವಿಷಯಗಳಲ್ಲೂ 100ಕ್ಕೆ 100 ಅಂಕಗಳನ್ನು ಪಡೆದಿದ್ದರು. ವಿಜ್ಞಾನದಲ್ಲಿ 99 ಅಂಕ ಗಳಿಸಿದ್ದರು. ವಿಜ್ಞಾನದ 1 ಅಂಕ ಕಡಿಮೆ ಬಂದಿರುವುದನ್ನು ಮರಮೌಲ್ಯಮಾಪನದ ಮೂಲಕ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಹಾಗೂ  ಜಿಲ್ಲೆಯ ಮೊದಲಿಗ ಎನ್ನುವ ದಾಖಲೆಯನ್ನೂ  ಮೊಹಮ್ಮದ್‌ ಕೈಫ್‌ ಬರೆದಿದ್ದಾರೆ.

ಬೆಳಗಾವಿಯ ಮೊಹಮ್ಮದ್‌ ಕೈಫ್‌ ಮುಲ್ಲಾರವರ ನಿವಾಸಕ್ಕೆ ಭೇಟಿ ನೀಡಿದ ನಿಯೋಗವು ಧನ ಸಹಾಯ ಹಾಗೂ ಶೀಲ್ಡ್ ನೀಡಿ ನೀಡಿ ಅಭಿನಂದಿಸಿ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದೆ.

ನಿಯೋಗದಲ್ಲಿ ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷ ಮೋಹಿನುದ್ದೀನ್ ಮಜಾವರ್, ಜಿಲ್ಲಾ ಕಾರ್ಯದರ್ಶಿ ಅಬಿದ್ ಖಾನ್ ಪಠಾಣ್, ಉದ್ಯಮಿ ಮಾಲಕ ಅಬ್ದುಲ್ ಬಾಸಿತ್,  ಹಿರಿಯರಾದ ಇಸ್ಮಾಯಿಲ್ ಉಪಸ್ಥಿತರಿದ್ದರು.

To Top
error: Content is protected !!
WhatsApp chat Join our WhatsApp group