ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡ: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಹಾಲಿನ ಡೈರಿಯಿಂದ ಹಿಂತಿರುಗುತ್ತಿದ್ದ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡ ದುಷ್ಕರ್ಮಿಗಳು

ವರದಿಗಾರ(ಜೂ.26): ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಯುವತಿಯೊಬ್ಬರ ಮೇಲೆ ನಾಲ್ವರು ಅತ್ಯಾಚಾರಿಗಳು ಸೋಮವಾರದಂದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು ವರದಿಯಾಗಿದೆ.

ಹಾಲಿನ ಡೈರಿಯಿಂದ ಹಿಂದುರುಗುತ್ತಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ದುಷ್ಕರ್ಮಿಗಳು ರಸ್ತೆ ಮಧ್ಯೆ ಯುವತಿಯನ್ನು ಅಡ್ಡಗಟ್ಟಿ ಅಪಹರಿಸಿದ್ದು, ಬಳಿಕ ಆಟೋ ರಿಕ್ಷಾದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ.

ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ಯುವತಿ ನಡೆದಿರುವ ವಿಚಾರವನ್ನು ಮನೆ ಮಂದಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಪ್ರಕರಣದ ಬಗ್ಗೆ ಇಂದು ಬೆಳಿಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾರೆ. ದೂರನ್ನು ದಾಖಲಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಪ್ರವೃತ್ತರಾಗಿದ್ದಾರೆ.

To Top
error: Content is protected !!
WhatsApp chat Join our WhatsApp group