ಜಿಲ್ಲಾ ಸುದ್ದಿ

ಇಂದು ಬಿ.ಎ. ಮೊಹಿದೀನ್ ರವರ ಆತ್ಮಕಥನ ‘ನನ್ನೊಳಗಿನ ನಾನು’ ಬಿಡುಗಡೆ, ಹಿರಿಯ ಮುತ್ಸದ್ದಿಗೆ ನುಡಿನಮನ

ವರದಿಗಾರ (ಜು.20): ಇತ್ತೀಚೆಗಷ್ಟೇ ನಿಧನರಾದ ಹಿರಿಯ ಮುತ್ಸದ್ದಿ, ಮಾಜಿ ಸಚಿವ ಬಿ.ಎ. ಮೊಹಿದೀನ್ ರವರ ಆತ್ಮಕಥನ ‘ನನ್ನೊಳಗಿನ ನಾನು’ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಇಂದು (20 ಜುಲೈ, 2018)ಸಂಜೆ 4ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

‘ನನ್ನೊಳಗಿನ ನಾನು’ ಆತ್ಮಕಥನವನ್ನು ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಬಿಡುಗಡೆಗೊಳಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ದಿ. ಬಿ.ಎ. ಮೊಹಿದೀನ್ ರವರಿಗೆ ‘ನುಡಿನಮನ’ವನ್ನು ಹಮ್ಮಿಕೊಳ್ಳಲಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್, ಮಾಜಿ ಸಚಿವ ಎಂ.ಸಿ. ನಾಣಯ್ಯ, ಸಚಿವರಾದ ಯು.ಟಿ.ಖಾದರ್, ಝಮೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಐವನ್ ಡಿ’ಸೋಜಾ, ಶಾಸಕ ಡಿ. ವೇದವ್ಯಾಸ ಕಾಮತ್, ಮಾಜಿ ಶಾಸಕರಾದ ಯೋಗೀಶ್ ಭಟ್, ಶಿಕ್ಷಣ ತಜ್ಞರಾದ ಫ್ರೋ.ಕೆ.ಇ. ರಾಧಾ ಕೃಷ್ಣ, ಮಂಗಳೂರು ಮೇಯರ್ ಭಾಸ್ಕರ ಮೊಯ್ಲಿ ಹಾಗೂ ಇನ್ನಿತರ ಸಾಮಾಜಿಕ, ರಾಜಕೀಯ, ಧಾರ್ಮಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆತ್ಮಕಥನ ನಿರೂಪಕ ಬಿ.ಎ. ಮುಹಮ್ಮದ್ ಅಲಿ ಕಮ್ಮರಡಿ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group