ರಾಜ್ಯ ಸುದ್ದಿ

‘ಸಮ್ಮಿಶ್ರ ಸರ್ಕಾರದ ಸಾಧನೆ ಶೂನ್ಯ’ : ಯಡಿಯೂರಪ್ಪ

  •  ಮಾಜಿ ಪ್ರಧಾನಿ ವಿರುದ್ಧ ವಾಗ್ದಾಳಿ

  • ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಸ್ಪರ್ಧಿಸುತ್ತಾರೆ; ಯಡಿಯೂರಪ್ಪ ಸ್ಪಷ್ಟನೆ

ವರದಿಗಾರ (ಆ.05): ರಾಜ್ಯ ಸಮ್ಮಿಶ್ರ ಸರಕಾರದ ವಿರುದ್ಧ ಧ್ವನಿಯೆತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ‘ಸಮ್ಮಿಶ್ರ ಸರ್ಕಾರದ ಸಾಧನೆ ಶೂನ್ಯ’ ಎಂದು ಹೇಳಿದ್ದಾರೆ. ಸಹಕಾರ ಕ್ಷೇತ್ರ ಸಂಪೂರ್ಣ ದಿವಾಳಿಯಾಗಿದೆ. ಹೊಸ ಸಾಲವೂ ಸಿಗುತ್ತಿಲ್ಲ. ಹಳೆಯ ಸಾಲವೂ ನವೀಕರಣವಾಗುತ್ತಿಲ್ಲ. ಸಾಲಮನ್ನಾ ಎಂಬ ಭ್ರಮೆಯಲ್ಲಿ ರೈತ ಸಮುದಾಯ ಇದೆ ಎಂದು ಅವರು ಹೇಳಿದ್ದಾರೆ.

ಅವರು ಪಕ್ಷದ ಮೈಸೂರು ನಗರ (ಜಿಲ್ಲಾ) ಕಾರ್ಯಕಾರಿಣಿ ಉದ್ಘಾಟಿಸಿ ಭಾನುವಾರ ಮಾತನಾಡುತ್ತಾ, ‘ಬೇರೆ ದೇಶದ ಜನರಿಗೆ ಇಲ್ಲಿ ಅವಕಾಶ ಮಾಡಿಕೊಡಬೇಕು ಎನ್ನುವುದು ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದ 41 ಲಕ್ಷ ಜನರ ವಿರುದ್ದ ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡರೆ ಮಮತಾ ಬ್ಯಾನರ್ಜಿ ಹಾಗೂ ಎಚ್.ಡಿ.ದೇವೇಗೌಡ ವಿರೋಧಿಸುತ್ತಾರೆ. ಇದು ಅವರ ರಾಜಕೀಯ ಲೆಕ್ಕಾಚಾರ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣ ಅಭಿವೃದ್ಧಿಗೆ 700 ಕೋಟಿ, ಮೈಸೂರು–ಬೆಂಗಳೂರು ಹೆದ್ದಾರಿ ಅಭಿವೃದ್ಧಿಗೆ 7 ಸಾವಿರ ಕೋಟಿ, ನಾಗನಹಳ್ಳಿ ಬಳಿ ರೈಲ್ವೆ ಸೆಟಲೈಟ್ ನಿಲ್ದಾಣ ಸ್ಥಾಪಿಸಲು 750 ಕೋಟಿ ಹಣವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಮಾಹಿತಿ ನೀಡಿದರು.
‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಸ್ಪರ್ಧಿಸುತ್ತಾರೆ’. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದ್ಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group