ರಾಜ್ಯ ಸುದ್ದಿ

ಅಖಂಡ ಕರ್ನಾಟಕ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ ಕುಮಾರಸ್ವಾಮಿ

‘ಭರತ ಭೂಮಿ ನನ್ನ ತಾಯಿ ನನ್ನ ಪೊರೆವ ತೊಟ್ಟಿಲು, ಜೀವನವೇ ದೇವಿಗೆರೆವೆ ಬಿಡುತೆ ಗುಡಿಯ ಕಟ್ಟಲು’ ರಾಷ್ಟ್ರಕವಿ ಕುವೆಂಪು ರವರ ಕವನದಿಂದ ಭಾಷಣ ಆರಂಭಿಸಿದ ಮುಖ್ಯಮಂತ್ರಿ

ವರದಿಗಾರ (ಆ.15): ರಾಷ್ಟ್ರಕವಿ ಕುವೆಂಪು ರವರ ಕವನದಿಂದ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ’ಭರತ ಭೂಮಿ ನನ್ನ ತಾಯಿ ನನ್ನ ಪೊರೆವ ತೊಟ್ಟಿಲು, ಜೀವನವೇ ದೇವಿಗೆರೆವೆ ಬಿಡುತೆ ಗುಡಿಯ ಕಟ್ಟಲು’ ಎಂಬುವುದನ್ನು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಅವರು ಉಲ್ಲೇಖಿಸಿದ್ದಾರೆ.

ಅವರು 72ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್‌ ಮೈದಾನದಲ್ಲಿ  ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ರಾಜ್ಯದ ಜನರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು.

ಮಹಾತ್ಮ ಗಾಂಧಿ 150ನೇ ವರ್ಷದ ಆಚರಣೆ ಪ್ರಯುಕ್ತ ‘ಗಾಂಧಿ 150 ಒಂದು ರಂಗ ಪಯಣ’. ಶೀರ್ಷಿಕೆಯಡಿ ರಾಜ್ಯದಾದ್ಯಂತ 1000 ರಂಗ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.  ಸ್ವಾಮಿ ವಿವೇಕಾನಂದ ಅವರು ಷಿಕಾಗೊದ ಸರ್ವಧರ್ಮ ಸಮ್ಮೇಳನದಲ್ಲಿ ಭಾಷಣ ಮಾಡಿದ 125ನೇ ವರ್ಷಾಚರಣೆಯನ್ನು ಆಚರಿಸಲಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

ಸರ್ಕಾರ  ಅಖಂಡ ಕರ್ನಾಟಕ ಅಭಿವೃದ್ಧಿಗೆ ಬದ್ದವಾಗಿದೆ. ಬೆಳಗಾವಿಗೆ ಕೆಲವು ಇಲಾಖೆ ಕಚೇರಿಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.

ರೈತರ 49000 ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿದೆ.  ರೈತರಿಗೆ ಆಧುನಿಕ ಕೃಷಿ ಮಾಹಿತಿ ನೀಡುವಲ್ಲಿ ಜಿಲ್ಲೆಯಲ್ಲಿ ಪ್ರತಿ ತಿಂಗಳು ‘ರೈತ ಸ್ಪಂದನ’ ಕಾರ್ಯಕ್ರಮ ಆಯೋಜಿಸಲಾಗುವುದು ಎಂದಿದ್ದಾರೆ.

ಗೌರಿಬಿದನೂರು ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಡಾ. ಎಚ್. ನರಸಿಂಹಯ್ಯ ಹೆಸರಿನಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲಾಗುವುದು. ಸರ್ಕಾರಿ ಶಾಲೆಗಳ ಆಧುನೀಕಣ ಮಾಡಲಾಗುವುದು,  ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ಕಾಲೇಜು ಸ್ಥಾಪನೆ ಮಾಡಲಾಗುವುದು. ಹಾಗೇ  ಕಲಿತ ಶಾಲೆಯ ಅಭಿವೃದ್ಧಿಗೆ ನೆರವಾಗುವವರಿಗೆ ಪೋರ್ಟಲ್ ಸ್ಥಾಪಿಸಿ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ಸೌರವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುವುದು. ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಏಕೀಕೃತ ಭೂಸಾರಿಗೆ ಪ್ರಾಧಿಕಾರ ಸ್ಥಾಪನೆ ಮಾಡಿ ದಟ್ಟಣೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುವುದು.

ಸಾಮಾಜಿಕ ಅರಣ್ಯ ಬೆಳವಣಿಗೆಗೆ ‘ಹಸಿರು ಕರ್ನಾಟಕ ‘ ಯೋಜನೆ,  ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿ 3831 ಕಿ.ಮೀ ಹೆದ್ದಾರಿ ಅಭಿವೃದ್ಧಿ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿಗಳು ತಿಂಗಳಿಗೊಮ್ಮೆ ತಾಲ್ಲೂಕಿನಲ್ಲಿ ಸಮೀಕ್ಷಾ ಸಭೆ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಬೇಕು. ತಿಂಗಳಿನಲ್ಲಿ ಒಮ್ಮೆ ಹೋಬಳಿ ಮಟ್ಟದಲ್ಲಿ ವಾಸ್ತವ್ಯ ಹೂಡಬೇಕು ಎಂದರು.

To Top
error: Content is protected !!
WhatsApp chat Join our WhatsApp group