ಜಿಲ್ಲಾ ಸುದ್ದಿ

ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿದ್ದ ಆರೋಪಿಯ ಬಂಧನ; ಪೊಲೀಸರ ಕರ್ತವ್ಯಕ್ಕೆ ಶ್ಲಾಘನೆ

ವರದಿಗಾರ(ಆ.17): ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂದಗೆರೆ ಗ್ರಾಮದ ಚಂದ್ರೇಗೌಡ ರವರ ಮನೆಗೆ ನುಗ್ಗಿ ಕಳ್ಳತನ ಮಾಡಿ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕಟ್ಟೇತಿಮ್ಮನಹಳ್ಳಿ ಗ್ರಾಮದ ಚಂದ್ರೇಗೌಡ ಎಂಬವರ ಮಗ ಪರಮೇಶ (24ವ) ಎಂದು ಗುರುತಿಸಲಾಗಿದೆ.

ಕಳೆದ ಎಪ್ರಿಲ್ 26ರಂದು ಚಂದ್ರೇಗೌಡ ರವರ ಮನೆಯಲ್ಲಿ ಬೀಗ ಹಾಕಿದ್ದ ಸಂದರ್ಭವನ್ನು ಬಳಸಿಕೊಂಡ ಆರೋಪಿ ಚಿನ್ನಾಭರಣವನ್ನು ದೋಚಿ ಪೊಲೀಸ್ ಕಣ್ಣಿನಿಂದ ತಪ್ಪಿಸಿಕೊಂಡಿದ್ದ.

ಚಿಕ್ಕಮಗಳೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಮಹಮದ್ ಸಲೀಂ ಅಬ್ಬಾಸ್ ರವರ ನೇತೃತ್ವದಲ್ಲಿ ತಂಡವನ್ನು ರಚಿಸಿ  ಅ ಮೂಲಕ ಅರೋಪಿಯನ್ನು ಬಂಧಿಸಲು ತಂಡ ಯಶಸ್ವಿಯಾಗಿದ್ದು, ಆರೋಪಿಯಿಂದ ಸುಮಾರು 6,44,500 ರೂಪಾಯಿ ಬೆಲೆ ಬಾಳುವ 222ಗ್ರಾಂ ಚಿನ್ನಾಭರಣ,1 ಬೈಕ್, 1ಮೊಬೈಲ್ ನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ಪತ್ತೆ ಮಾಡಿದ  ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿ ಬಹುಮಾನ ನೀಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

To Top
error: Content is protected !!
WhatsApp chat Join our WhatsApp group