ರಾಜ್ಯ ಸುದ್ದಿ

ಅಧಿಕಾರಕ್ಕೇರಲು ಬಿಜೆಪಿ ಹಗಲು ಕನಸು ಕಾಣುತ್ತಿದೆ: ಸಿದ್ದರಾಮಯ್ಯ

ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಲಜ್ಜೆಗೆಟ್ಟು ಪ್ರಯತ್ನ

‘ಯಾವ ಶಾಸಕರೂ ರಾಜೀನಾಮೆ ನೀಡುವುದಿಲ್ಲ’:ಸಿದ್ದರಾಮಯ್ಯ ಸ್ಪಷ್ಟನೆ

ವರದಿಗಾರ (ಸೆ.19): ಕರ್ನಾಟಕ ರಾಜ್ಯದಲ್ಲಿನ ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಲಜ್ಜೆಗೆಟ್ಟು ಪ್ರಯತ್ನ ನಡೆಸಿದ್ದು, ಅಧಿಕಾರಕ್ಕೆ ಬರಲು ಹಗಲು ಕನಸು ಕಾಣುತ್ತಿದ್ದಾರೆ. ಆದರೆ, ಅವರ ಪ್ರಯತ್ನ ಯಾವುದೇ ಕಾರಣಕ್ಕೂ ಯಶಸ್ಸು ಕಾಣುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಈ ಹಿಂದೆಯೂ ಆಪರೇಷನ್ ಕಮಲದ ಮೂಲಕ ಸರಕಾರ ರಚಿಸಿದ್ದ ಬಿಜೆಪಿ, ಮಾನ-ಮಾರ್ಯಾದೆ ಬಿಟ್ಟು ಇದೀಗ ಅದೇ ಪ್ರಯತ್ನವನ್ನು ನಡೆಸುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಅಥವಾ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಗೊಂದಲ ಅಥವಾ ಅಸಮಾಧಾನವೂ ಇಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ, ಆಧಾರ ರಹಿತ ಮತ್ತು ಊಹಾಪೋಹದ ಸುದ್ದಿಯಷ್ಟೇ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪರಮೇಶ್ವರ್ ನಾಯ್ಕ, ಎಂ.ಬಿ.ಪಾಟೀಲ್, ಭೀಮಾನಾಯ್ಕ, ಬಿ.ಸಿ.ಪಾಟೀಲ್ ಸೇರಿ ಹಲವು ಮಂದಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು, ಬೇಡಿಕೆಯನ್ನಿಟ್ಟಿದ್ದಾರೆ. ಆದರೆ, ಯಾರೂ ಪಕ್ಷ ಬಿಡುವ ಮಾತುಗಳನ್ನು ಆಡಿಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಣೆ ನೀಡಿದ್ದಾರೆ.

To Top
error: Content is protected !!
WhatsApp chat Join our WhatsApp group