ಅನಿವಾಸಿ ಕನ್ನಡಿಗರ ವಿಶೇಷ

ಅನಿವಾಸಿ ಭಾರತೀಯ ಫೋರಂನ ಉಪಾಧ್ಯಕ್ಷ ತನೀರ್ ಅಹ್ಮದ್ ರಿಗೆ ಇಂಡಿಯನ್ ಸೋಶಿಯಲ್ ಫೋರಂ ಅಭಿನಂದನೆ

ವರದಿಗಾರ (ಅ 24) :  ಅನಿವಾಸಿ ಭಾರತೀಯ ಫೋರಂ ಕರ್ನಾಟಕ ಇದರ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ತನ್ವೀರ್ ಅಹ್ಮದ್ ರವರಿಗೆ ಇಂಡಿಯನ್ ಸೋಶಿಯಲ್ ಫೋರಂ ಪೂರ್ವ ಪ್ರಾಂತ್ಯ ಸೌದಿ ಅರೇಬಿಯಾ ಪರವಾಗಿ ಅಭಿನಂದಿಸಲು ಅತೀವ ಸಂತಸ ಪಡುತ್ತಿದೆ ಎಂದು ರಾಜ್ಯಾಧ್ಯಕ್ಷ ಮುಹಮ್ಮದ್ ಶರೀಫ್ ಹೇಳಿದ್ದಾರೆ

ಈಗಾಗಲೇ ಸ್ಥಾಪಿಸಿದ ಅನಿವಾಸಿ ಭಾರತೀಯ ಫೋರಮಿನ ಸೌದಿ ಅರೇಬಿಯಾದಾದ್ಯಂತ ಇರುವ ಸಂಪರ್ಕವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಕರ್ನಾಟಕ ಸರ್ಕಾರ ಮತ್ತು ಚದುರಿಕೊಂಡಿರುವ ಅನಿವಾಸಿ ಕನ್ನಡಿಗರ ನಡುವೆ ಸಂಪರ್ಕ ಸಾಧಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ ಮತ್ತು ವಿವಿಧ ಸಮಾಜಿಕ ಸಂಘಟನೆಗಳು ಈಗಾಗಲೇ ಸಲ್ಲಿಸಿದ ಹಿಂದಿನ ಅಧ್ಯಯನಗಳು ಮತ್ತು ಶಿಫಾರಸುಗಳನ್ನು ಪರಿಗಣಿಸಿ ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ ಎಂಬ‌ ನಂಬಿಕೆ ಇದೆ ಎಂದು ರಾಜ್ಯಾಧ್ಯಕ್ಷರು ಹೇಳಿದರು.

ಸೌದಿ ಅರೇಬಿಯಾದಲ್ಲಿ ಕರ್ನಾಟಕದ ಸಂಸ್ಕೃತಿ ಮತ್ತು ಕಲೆಗಳನ್ನು ಉತ್ತೇಜಿಸುವಲ್ಲಿ ಇಂಡಿಯನ್ ಸೋಶಿಯಲ್ ಫೋರಂ ಸಂಪೂರ್ಣ ಬೆಂಬಲದ ಭರವಸೆಯನ್ನು ನೀಡುತ್ತದೆ, ಇಂಡಿಯನ್ ಸೋಶಿಯಲ್ ಫೋರಂ ಕರ್ನಾಟಕ ಮತ್ತು ಅನಿವಾಸಿ ಭಾರತೀಯ ಫೋರಂ ನಡುವೆ ಅತ್ಯುತ್ತಮ ಬಾಂಧವ್ಯವನ್ನು ನಾವು ಆಶಿಸುತ್ತಿದ್ದೇವೆ ಎಂದೂ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿರುವ  ಈ ಅಧಿಕಾರಾವಧಿಯಲ್ಲಿ ಸರ್ವಶಕ್ತನು ಯಶಸ್ಸನ್ನು ನೀಡಲಿ ಎಂದು ಆಶಿಸುತ್ತೇವೆ ಎಂದು ಎಂದು ಇಂಡಿಯನ್ ಸೋಶಿಯಲ್ ಫೋರಂ ಪೂರ್ವ ಪ್ರಾಂತ್ಯ ಕರ್ನಾಟಕ ರಾಜ್ಯ, ಸೌದಿ ಅರೇಬಿಯಾ ಬಿಡುಗಡೆ ಮಾಡಿರುವ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ

To Top
error: Content is protected !!
WhatsApp chat Join our WhatsApp group