ರಾಷ್ಟ್ರೀಯ ಸುದ್ದಿ

ಗುಜರಾತ್ ಹತ್ಯಾಕಾಂಡ: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ಪಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ವರದಿಗಾರ (ನ.13): 2002ರಲ್ಲಿ ಗುಜರಾತಿನಲ್ಲಿ ನಡೆದ ಗುಜರಾತ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕ್ಲೀನ್‌ಚಿಟ್ ನೀಡಿದ್ದನ್ನು ಪ್ರಶ್ನಿಸಿ 2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಲ್ಲಿ ಬಲಿಯಾಗಿದ್ದ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಪತ್ನಿ ಝಾಕಿಯಾ ಜಾಫ್ರಿ ಸಲ್ಲಿಸಿರುವ ಅರ್ಜಿಯನ್ನು ನ.19ಕ್ಕೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಇಂದು ಸಮ್ಮತಿ ನೀಡಿದೆ.

‘ಸೂಕ್ತ ಸಾಕ್ಷಾಧಾರದ ಕೊರತೆಯ ಕಾರಣ ನೀಡಿ ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ಇತರ ರಾಜಕಾರಣಿಗಳು, ಹಿರಿಯ ಅಧಿಕಾರಿಗಳನ್ನು ವಿಶೇಷ ತನಿಖಾ ತಂಡ(ಸಿಟ್)ದೋಷ ಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ಎಹ್ಸಾನ್ ಜಾಫ್ರಿ ಪತ್ನಿ ಝಾಕಿಯಾ ಜಾಫ್ರಿ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು.

2012ರಲ್ಲಿ ಮೆಟ್ರೊಪಾಲಿಟನ್ ನ್ಯಾಯಾಲಯ ಗೋಧ್ರಾ ಗಲಭೆ ಬಳಿಕ ನಡೆದ ಹತ್ಯಾಕಾಂಡದಲ್ಲಿ ಆರೋಪಿಗಳಾಗಿದ್ದ ಎಲ್ಲ 58 ಮಂದಿಯನ್ನು ದೋಷ ಮುಕ್ತಗೊಳಿಸಿತ್ತು. ಸಿಟ್ ಪ್ರಕಾರ ಝಾಕಿಯಾ ದೂರಿನಲ್ಲಿ ಪಟ್ಟಿ ಮಾಡಿರುವ 58 ಮಂದಿಯ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಎಂಎಸ್ ಭಟ್ ತೀರ್ಪು ನೀಡಿತ್ತು. ಆ ಬಳಿಕ ಅರ್ಜಿದಾರರು 2013ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಗುಜರಾತ್ ಹೈಕೋರ್ಟ್ ಕಳೆದ ವರ್ಷ ಮೆಟ್ರೊಪಾಲಿಟನ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ನರೋಡಾಪಾಟಿಯಾ, ನರೋಡಾ ಗಾಮ್ ಹಾಗೂ ಗುಲ್ಬರ್ಗ್ ಗಲಭೆ ಪ್ರಕರಣಗಳ ಹಿಂದೆ ‘ಭಾರೀ ಸಂಚು’ಅಡಗಿದೆ ಎಂಬ ಜಾಫ್ರಿಯ ಆರೋಪವನ್ನು ನ್ಯಾಯಾಲಯ ತಿರಸ್ಕರಿಸಿತ್ತು ಎಂಬುವುದನ್ನು ಇಲ್ಲಿ ಸ್ಮರಿಸಬಹುದು.

To Top
error: Content is protected !!
WhatsApp chat Join our WhatsApp group