ರಾಜ್ಯ ಸುದ್ದಿ

ಯಡಿಯೂರಪ್ಪರ ಪ್ರಮಾಣಪತ್ರ ನನಗೆ ಬೇಕಿಲ್ಲ; ಅವರ ಬಾಲಿಶ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

‘ಬಿಜೆಪಿಯವರು ಜನಹಿತ ವಿಷಯಗಳ ಬಗ್ಗೆ ಚರ್ಚಿಸುವುದನ್ನು ಸ್ವಾಗತಿಸುತ್ತೇನೆ’

ವರದಿಗಾರ (ಡಿ.10): ‘ಮುಖ್ಯಮಂತ್ರಿ ಶೋಕಿಲಾಲ, ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಉಳಿಯದೇ ಹೊರಗಡೆ ವಾಸ್ತವ್ಯ ಹೂಡುತ್ತಿದ್ದಾರೆ. ಭತ್ತ ಕೊಯ್ಯಲು ಅವರನ್ನು ಮುಖ್ಯಮಂತ್ರಿ ಮಾಡಿಲ್ಲ’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ‘ಯಡಿಯೂರಪ್ಪರ ಪ್ರಮಾಣಪತ್ರ ನನಗೆ ಬೇಕಿಲ್ಲ. ಜನರು ನಿರ್ಧರಿಸುತ್ತಾರೆ. ರಾಜ್ಯದ ಹಿತಕ್ಕೆ ಸಂಬಂಧಿಸಿದ ವಿಷಯಗಳಿದ್ದರೆ ಮಾತ್ರ ಯಡಿಯೂರಪ್ಪ ಮಾತುಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ’ ಎಂದು ಹೇಳಿದ್ದಾರೆ.

ಅವರು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಅಧಿವೇಶನ ಚೆನ್ನಾಗಿ ನಡೆಯಬೇಕು ಎನ್ನುವುದು ನಮ್ಮ ಬಯಕೆ. ಇದಕ್ಕಾಗಿಯೇ ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಬಿಜೆಪಿಯವರು ಒಳ್ಳೆಯ ವಿಷಯಗಳ ಬಗ್ಗೆ ಚರ್ಚಿಸಲಿ ಎಂದು ಹೇಳಿದ್ದಾರೆ. ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಸಂಪೂರ್ಣ ಅಧಿಕಾರ ಇದೆ. ಮಾಡಲಿ ಬಿಡಿ ಎಂದೂ ಹೇಳಿದ್ದಾರೆ.

ಅಧಿವೇಶನದ ನಂತರ ಸರ್ಕಾರ ಬೀಳಿಸಿ ಆಂದೋಲನ ನಡೆಸುವುದಾಗಿ ಯಡಿಯೂರಪ್ಪ ಹೇಳಿದ್ದಾರಲ್ಲ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂಪೂರ್ಣವಾಗಿ ಸ್ವಾಗತಿಸುತ್ತೇನೆ ಎಂದಿದ್ದಾರೆ.

 

 

To Top
error: Content is protected !!
WhatsApp chat Join our WhatsApp group