ರಾಜ್ಯ ಸುದ್ದಿ

ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಒಪ್ಪಲಾಗದು ಎಂದ ಕೇಂದ್ರ

ವರದಿಗಾರ (ಡಿ.10): ‘ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಕುರಿತಂತೆ ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾವವನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಹೇಳಿದೆ.

ಈ ಕುರಿತ ಕೇಂದ್ರ ಗೃಹ ಇಲಾಖೆ 2018ರ ನವೆಂಬರ್ 13ರಂದು ರಾಜ್ಯ ಸರ್ಕಾರಕ್ಕೆ ತಿಳಿಸಿರುವ ಪತ್ರವನ್ನು ಹೈಕೋರ್ಟ್‌ ಗೆ ಸಲ್ಲಿಸಲಾಗಿದೆ. ಲಿಂಗಾಯತರಿಗೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತ ಆಯೋಗವು ತಜ್ಞರ ಸಮಿತಿ ರಚನೆಗೆ ಆದೇಶ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ನಾಲ್ಕು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ನೇತೃತ್ವದ  ವಿಭಾಗೀಯ ನ್ಯಾಯಪೀಠ ಸೋಮವಾರ ವಿಲೇವಾರಿ ಮಾಡಿದೆ. ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟರ್ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ಕೇಂದ್ರದ ಆದೇಶವನ್ನು ಮೆಮೊ (ಜ್ಞಾಪನಾ ಪತ್ರ) ಮೂಲಕ ನ್ಯಾಯಪೀಠಕ್ಕೆ ಸಲ್ಲಿಸಿದರು.

ಕೇಂದ್ರ ಸರಕಾರ ಒಪ್ಪಿಗೆ ನೀಡಡಿರಲು ಕಾರಣವೇನು?ಲಿಂಗಾಯತ-ವೀರಶೈವರು ಹಿಂದೂ ಧರ್ಮದ ಅವಿಭಾಜ್ಯ ಅಂಗ ಎಂದು ಹೇಳಿದೆ. ಈ ಅಂಶ ಈಗಾಗಲೇ 1871 ರ ಮೊದಲ ಜನಗಣತಿ ವೇಳೆಯಲ್ಲಿ ವೇದ್ಯವಾಗಿದೆ ಎಂದು ಹೇಳಿದೆ. ಒಂದು ವೇಳೆ ಶಿಫಾರಸು ಮಾನ್ಯ ಮಾಡಿದರೆ ಈಗಾಗಲೇ ಲಿಂಗಾಯತ-ವೀರಶೈವ ಪಂಗಡದಲ್ಲಿ ಪರಿಶಿಷ್ಟ ಜಾತಿ ಸೌಲಭ್ಯ ಪಡೆಯುತ್ತಿರುವವರು ಅದರಿಂದ ವಂಚಿತರಾಗುತ್ತಾರೆ ಎಂದು ಹೇಳಿ ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಕೇಂದ್ರ ಸರಕಾರ ನಿರಾಕರಿಸಿದೆ.

To Top
error: Content is protected !!
WhatsApp chat Join our WhatsApp group