ರಾಜ್ಯ ಸುದ್ದಿ

ಸುಳ್ಳು ಹೇಳುವ ಪ್ರಧಾನಿ ಮೋದಿಯನ್ನು ಜನತೆ ತಿರಸ್ಕರಿಸಿದ್ದಾರೆ: ದಿನೇಶ್ ಗುಂಡೂರಾವ್

‘ಜನತೆ ಭಾಷಣ, ಸುಳ್ಳು ಅಶ್ವಾಸನೆಗಳನ್ನು ಕೇಳಲು ಇಷ್ಟಪಡುವುದಿಲ್ಲ’

ವರದಿಗಾರ (ಡಿ.12): ಸುಳ್ಳು ಹೇಳುವ ಪ್ರಧಾನಿ ಮೋದಿಯನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬೆಳಗಾವಿಯಲ್ಲಿ ಹೇಳಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಜನರು ಭಾಷಣ, ಸುಳ್ಳು ಅಶ್ವಾಸನೆಗಳನ್ನು ಕೇಳಲು ಇಷ್ಟಪಡುವುದಿಲ್ಲ. ಅಲ್ಲದೆ, ಈ ಚುನಾವಣೆಯಲ್ಲಿ ಕಣ್ಣಿಗೆ ಕಣ್ಣಿಟ್ಟು ಸುಳ್ಳು ಹೇಳುವ ಪ್ರಧಾನಿ ಮೋದಿಯನ್ನು ತಿರಸ್ಕಾರ ಮಾಡಿದ್ದಾರೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದೇಶದ ಜನರು ವಿಶ್ವಾಸವನ್ನು ಇಟ್ಟಿಲ್ಲ. ಪ್ರಧಾನಿ ಮೋದಿ ಶ್ರೀಮಂತರ ಪರ ಕೆಲಸ ಮಾಡಿದ್ದಾರೆ. ಹೀಗಾಗಿಯೇ,  ಬಿಜೆಪಿ ಆಡಳಿತ ಇದ್ದ ರಾಜ್ಯಗಳಲ್ಲೂ ಸೋಲು ಕಂಡಿದೆ ಎಂದು ಅವರು ಪಂಚರಾಜ್ಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

To Top
error: Content is protected !!
WhatsApp chat Join our WhatsApp group