ಹನಿ ಸುದ್ದಿ

ಪ್ರಧಾನಿ ಮೋದಿ, ಅಮಿತ್ ಶಾ ದೇಶಕ್ಕೆ ಅಪಾಯಕಾರಿ: ಕೇಜ್ರಿವಾಲ್

‘ಅವರು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೂ ಬಿಡಲಾರರು’

‘ಅವರನ್ನು ತಡೆಯಲು ಏನು ಮಾಡಲು ಸಾಧ್ಯವೋ ಅದೆಲ್ಲವನ್ನೂ ಮಾಡಬೇಕು’

ವರದಿಗಾರ (ಡಿ.17): ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ದೇಶದ ಸದ್ಯದ ಸ್ಥಿತಿ ಮತ್ತು ಭವಿಷ್ಯಕ್ಕೆ ಅಪಾಯಕಾರಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

“ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಜೋಡಿ ದೇಶದ ಪ್ರಸಕ್ತ ಸ್ಥಿತಿ ಮತ್ತು ಭವಿಷ್ಯಕ್ಕೆ ಅಪಾಯಕಾರಿಯಾಗಿದ್ದಾರೆ. 2019ರಲ್ಲಿ ಮತ್ತೆ ಅವರು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೂ ಬಿಡಲಾರರು. ಇದು ನಡೆಯುವುದನ್ನು ತಡೆಯಲು ಏನು ಮಾಡಲು ಸಾಧ್ಯವೋ ಅದೆಲ್ಲವನ್ನೂ ಮಾಡಬೇಕು” ಎಂದು ಅರವಿಂದ್ ಕೇಜ್ರಿವಾಲ್ ಜನತೆಗೆ ಎಚ್ಚರಿಕೆ ನೀಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕರೆ ನೀಡಿದ್ದಾರೆ.

ಇತ್ತೀಚೆಗೆ ನಡೆದಮಧ್ಯಪ್ರದೇಶ, ಮಿಝೋರಾಂ, ರಾಜಸ್ತಾನ, ತೆಲಂಗಾಣ ಹಾಗು ಛತ್ತೀಸ್ ಗಢ ಪಂಚರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲನುಭವಿಸಿತ್ತು. ಈ ಸೋಲು ಬಿಜೆಪಿ ಆಡಳಿತದ ಬಗ್ಗೆ ಜನರಿಗಿರುವ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

To Top
error: Content is protected !!
WhatsApp chat Join our WhatsApp group