ಸುತ್ತ-ಮುತ್ತ

ಪುತ್ತೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಷ್ಟ್ರೀಯ ವಿದ್ಯಾರ್ಥಿ ವೇತನ ವಿತರಣಾ ಹಾಗೂ ಸನ್ಮಾನ ಕಾರ್ಯಕ್ರಮ

ಪುತ್ತೂರು: ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪಿಎಫ್‌ಐ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ವೇತನ ವಿತರಣಾ ಹಾಗೂ ಸನ್ಮಾನ ಕಾರ್ಯಕ್ರಮವು ಶನಿವಾರ ಪುತ್ತೂರಿನ ಅಶ್ಮೀ ಕಂಫರ್ಟ್ ಸಭಾಂಗಣದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸುಕನ್ಯಾ ಡಿ.ಎನ್ B.E.O ಶಿಕ್ಷಣ ಇಲಾಖೆ ಪುತ್ತೂರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವುದು ಮತ್ತು ಹಿಂದುಳಿದ ಶಾಲೆ ಬಿಟ್ಟಂತಹ ವಿದ್ಯಾರ್ಥಿಗಳನ್ನು ಮತ್ತೆ ಅವರಿಗೆ ವಿದ್ಯಾಭ್ಯಾಸವನ್ನು ನೀಡುವುದು ನಿಜಕ್ಕೂ ಕಷ್ಟಕರವಾದ ಕೆಲಸ ಇಂತಹ ಕೆಲಸವನ್ನು ಪಿ.ಎಫ್.ಐಮಾಡಿಕೊಂಡು ಬರುತ್ತಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಪಿ.ಎಫ್.ಐ ಮಾಡುವಂತಹ ಇಂತಹ ಶೈಕ್ಷಣಿಕ ಕಾರ್ಯಕ್ರಮದ ಫಲಾನುಭವಿ ಪಡೆದಂತಹ ವಿದ್ಯಾರ್ಥಿಗಳು ಉನ್ನತ ಗುರಿಯನ್ನಿಟ್ಟು ಸಾಧನೆ ಮಾಡಿ ಪ್ರೋತ್ಸಾಹ ನೀಡಿದಂತೆ ಸಂಘಟನೆಯನ್ನು ನೆನಪಿನಲ್ಲಿಟ್ಟು ಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಿಎಫ್ಐ ರಾಜ್ಯ ಸಮಿತಿ ಸದಸ್ಯರಾದ ಮೊಹಮ್ಮದ್ ಶರೀಫ್ ರವರು ಶೈಕ್ಷಣಿಕ ಸಬಲೀಕರಣಕ್ಕಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಮ್ಮಿಕೊಂಡಿರುವ ಹಲವಾರು ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು ವಿದ್ಯಾರ್ಥಿಗಳು ಬದುಕಿನಲ್ಲಿ ಗುರಿ ನಿರ್ಣಯಿಸಿ ನಾಗರಿಕ ಸೇವೆಗಳ ಅಂತಹ ಉನ್ನತ ಹುದ್ದೆಗಳಿಗೆ ಪ್ರಯತ್ನಿಸಿ ಯಶಸ್ಸು ಗಳಿಸಬೇಕೆಂದು ಶುಭ ಹಾರೈಸಿದರು. ಅತಿಥಿಗಳಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿತಾ ಹೇಮನಾಥ ಶೆಟ್ಟಿ ಹಾಗೂ ಪುತ್ತೂರಿನ ಖ್ಯಾತ ವೈದ್ಯರಾದ Dr. ನಝೀರ್ ಅಹ್ಮದ್ ಮತ್ತು ಪುತ್ತೂರು ಸಿಟಿ ಕೌನ್ಸಿಲರ್ ಫಾತಿಮತ್ ಝುರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾಧ್ಯಕ್ಷ ರಾದ ಅಬೂಬಕ್ಕರ್ ರಿಝ್ವಾನ್ ಮಾತನಾಡಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಬೇಕು ಅದರಲ್ಲೂ ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಹೆತ್ತವರು ವಿಶೇಷ ಮುತುವರ್ಜಿ ವಹಿಸುಬೇಕು ಎಂದರು.

ಕಾರ್ಯಕ್ರಮದಲ್ಲಿ ಎಂ.ಪಿ ಅಬೂಬಕ್ಕರ್ ಹಾಗೂ ಫಾತಿಮಾತ್ ದಿಲ್ಶಾನಾ ಮತ್ತು ಯೋಧ ಝುಬೇರ್ ಹಳೆನೇರಂಕಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯದ 9 ಕಡೆಗಳಲ್ಲಿ 490 ವಿದ್ಯಾರ್ಥಿಗಳಿಗೆ ಸುಮಾರು 30 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ಕೊಡಲಾಗುತ್ತಿದ್ದು, ಆ ಪೈಕಿ ಶನಿವಾರ ಪುತ್ತೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ 60ಕ್ಕೂ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

To Top
error: Content is protected !!
WhatsApp chat Join our WhatsApp group