ಸುತ್ತ-ಮುತ್ತ

ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿದಾನಸಭಾ ಸಮಿತಿ ವತಿಯಿಂದ ಬಾಬರಿ ಮಸ್ಜಿದ್ ಎಕ್ಸ್ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು : ಎಸ್ಡಿಪಿಐ ಪುತ್ತೂರು ವಿಧಾನಸಭಾ ಸಮಿತಿ ವತಿಯಿಂದ ಬಾಬರಿ ಮಸ್ಜಿದ್ ಮರಳಿ ಪಡೆಯೋಣ ಭಾರತವನ್ನು ಮರಳಿ ಗಳಿಸೋಣ.ಎಂಬ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಬಾಬರಿ ಮಸ್ಜಿದ್ ಎಕ್ಸ್ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೂರ್ನಡ್ಕ ಫೀರ್ ಮೊಹಲ್ಲಾ ಜುಮಾ ಮಸ್ಜಿದ್ ಮುಂಭಾಗದಲ್ಲಿ ಇಂದು ದಿನಾಂಕ 22-02-2019 ರಂದು ನಡೆಯಿತು. ಎಸ್ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಬೂಬಕ್ಕರ್ ಸಿದ್ದೀಕ್ ಕೆ.ಎ ರವರು ಅದ್ಯಕ್ಷತೆ ವಹಿಸಿ ಧ್ವಜಾರೋಹಣಗೈದರು. ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಬ್ದುಲ್ ಲತೀಫ್ ಪುತ್ತೂರು ಮಾತನಾಡಿ 1992 ಡಿಸೆಂಬರ್ 6 ಸ್ವಾತಂತ್ರ ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನವಾಗಿದೆ. ಮುಸ್ಲಿಮರು ನಾಲ್ಕು ಶತಮಾನಕ್ಕಿಂತಲೂ ಹೆಚ್ಚು ಕಾಲ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದ ಅಯೋಧ್ಯೆಯ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದರು. ಬಾಬರಿ ಮಸೀದಿ ಧ್ವಂಸವು ಗಾಂಧಿಯ ಹತ್ಯೆಯ ನಂತರ ಸ್ವಾತಂತ್ರ ಭಾರತದಲ್ಲಿ ನಡೆದ ಅತ್ಯಂತ ಗಂಭೀರ ಅಪರಾಧವಾಗಿತ್ತು. ಮೊಗಲ್ ಚಕ್ರವರ್ತಿ ಬಾಬರ್ ಆದೇಶದಂತೆ ಆತನ ಕಮಾಂಡರ್ ಮೀರ್ ಬಾಕಿ ಅಯೋಧ್ಯೆಯ ಖಾಲಿ ಭೂಮಿಯಲ್ಲಿ ಮಸೀದಿ ನಿರ್ಮಿಸಿದರು ಎಂದು ಬಾಬರಿ ಮಸೀದಿ ಇತಿಹಾಸವನ್ನು ವಿವರಿಸಿದರು. ಹಾಗೂ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಡಕ್ಕೊಡಿ ಜುಮ್ಮಾ ಮಸೀದಿ ಖತೀಬರಾದ ಅಬ್ದುಲ್ ರಹಿಮಾನ್ ಫೈಝೀ ‍ಎಕ್ಸ್ ಪೋ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಸ್ಡಿಪಿಐ ಪುತ್ತೂರು ವಿಧಾನ ಸಭಾ ಸಮಿತಿ ಪ್ರಧಾನ ಕಾರ್ಯದರ್ಶಿ ಹಮೀದ್ ಮೆಜೆಸ್ಟಿಕ್, ಕಾರ್ಯದರ್ಶಿ ಅಶ್ರಫ್ ಬಾವು,ಉಪಾಧ್ಯಕ್ಷರಾದ ಇಬ್ರಾಹಿಂ ಸಾಗರ್, ತಾಲೂಕು ಸಮಿತಿ ಸದಸ್ಯರಾದ ಶಾಕೀರ್ ಅಳಕೆಮಜಲ್, ಪಿ.ಬಿ.ಕೆ ಮಹಮ್ಮದ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ರಿಝ್ವಾನ್ ,ಸಿಟಿ ಡಿವಿಜನ್ ಅಧ್ಯಕ್ಷರಾದ ಯಹ್ಯಾ ಕೂರ್ನಡ್ಕ, ಕೂರ್ನಡ್ಕ ಫೀರ್ ಮೊಹಲ್ಲಾ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿಯಾದ ಮಹಮ್ಮದ್ ಸಾಬ್, ಉದ್ಯಮಿ ಅಬ್ದುಲ್ ಹಮೀದ್ ಕೂರ್ನಡ್ಕ ಹಾಗೂ ಹಲವಾರು ನಾಯಕರು ಉಪಸ್ಥಿತರಿದ್ದರು.ಪುತ್ತೂರು ನಗರ ಸಮಿತಿ ಅದ್ಯಕ್ಷ ಬಶೀರ್ ಕೂರ್ನಡ್ಕ ಸ್ವಾಗತಿಸಿ.ಉಸ್ಮಾನ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group