ರಾಜ್ಯ ಸುದ್ದಿ

ರಾಜ್ಯದಲ್ಲಿ ಅಹಿಂದ ವರ್ಗದ ಧ್ವನಿ ಅಡಗಿಸುವ ಹುನ್ನಾರ ನಡೆಯುತ್ತಿದೆ:  ಸಚಿವೆ ಜಯಮಾಲಾ

‘ಖರ್ಗೆಯನ್ನು ಗೆಲ್ಲಿಸಿದರೆ ಸಂವಿಧಾನವನ್ನು ಗೆಲ್ಲಿಸಿದಂತೆ’

ವರದಿಗಾರ (ಎ.22): ‘ರಾಜ್ಯದಲ್ಲಿ ಅಹಿಂದ ವರ್ಗದ ಧ್ವನಿ ಅಡಗಿಸುವ ಹುನ್ನಾರ ವ್ಯವಸ್ಥಿತವಾಗಿ ನಡೆದಿದೆ. ಈ ಧ್ವನಿ ಗಟ್ಟಿಯಾಗಿ ನಿಲ್ಲಬೇಕಾದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮತ್ತೆ ಗೆಲ್ಲಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಹೇಳಿದ್ದಾರೆ.

ಅವರು ಗುಲ್ಬರ್ಗಾದಲ್ಲಿ ನಿನ್ನೆ ಹಮ್ಮಿಕೊಂಡಿದ್ದದ್ದ ಈಡಿಗ ಸಮಾಜದ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತಾ, ‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಗೆಲ್ಲಿಸುವುದು ಈ ಭಾಗದ ಜನರ ಗೌರವದ ಪ್ರತೀಕ. ಅವರನ್ನು ಗೆಲ್ಲಿಸಿದರೆ ಸಂವಿಧಾನವನ್ನು ಗೆಲ್ಲಿಸಿದಂತೆ’ ಎಂದು ಹೇಳಿದ್ದಾರೆ.

‘ಹಿಂದಿನ ಸಿದ್ದರಾಮಯ್ಯ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರದಲ್ಲಿ ಈಡಿಗ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾರಾಯಣಗುರು ಭವನಕ್ಕೆ ರೂ.5 ಕೋಟಿ ಅನುದಾನ ಒದಗಿಸಿದ್ದಾರೆ’ ಎಂದು ಇದೇ ಸಂದರ್ಭ ಸಚಿವೆ ನೆನಪಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group