ರಾಷ್ಟ್ರೀಯ ಸುದ್ದಿ

ದೆಹಲಿ: ಒಲಿಂಪಿಕ್ಸ್ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ  

ವರದಿಗಾರ (ಎ.23): ಒಲಿಂಪಿಕ್ಸ್ ವಿಜೇತ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್ ದೆಹಲಿಯ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವುದು ಬಹುತೇಕ ಖಚಿತವಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಕ್ಸರ್ ವಿಜೇಂದರ್ ಸಿಂಗ್, ‘ತನಗೆ ಅವಕಾಶ ನೀಡಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ. ’20 ವರ್ಷಗಳ ಬಾಕ್ಸಿಂಗ್ ವೃತ್ತಿ ಜೀವನದಲ್ಲಿ ದೇಶಕ್ಕೆ ಹೆಮ್ಮೆ ತರುವ ಕೆಲಸ ಮಾಡಿದ್ದೇನೆ. ಇದೀಗ ನನ್ನ ದೇಶದಲ್ಲಿ ಸೇವೆ ಮಾಡುವ ಅವಕಾಶ ಲಭಿಸಿದೆ’ ಎಂದು ಹೇಳಿದ್ದು, ಜನಸೇವಕನಾಗಲು ಹೊರಟಿದ್ದಾರೆ.

ಭಾರತದಲ್ಲಿ ಬಾಕ್ಸಿಂಗ್ ಹೆಚ್ಚು ಜನಪ್ರಿಯ ಕ್ರೀಡೆಯಾಗಲು ಮಹತ್ವದ ಕೊಡುಗೆ ನೀಡಿರುವ ಸಿಂಗ್‌ಗೆ 2010ರಲ್ಲಿ ದೇಶದ ಮೂರನೇ ಉನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿ ಪಡೆದಿರುವುದನ್ನು ಸ್ಮರಿಸಬಹುದು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group